LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಡಾ.ಸತೀಶಕುಮಾರ ಹೊಸಮನಿಗೆ ಬಸವ ಪ್ರಶಸ್ತಿ

ಬೆಂಗಳೂರು:
ಬಸವ ಜಯಂತಿ ಅಂಗವಾಗಿ ನಗರದ ರಮಣ ಮಹರ್ಷಿ ಸಮಾರಂಭ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಅವರಿಗೆ ಬಸವ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಡಾ.ಸತೀಶಕುಮಾರ ಹೊಸಮನಿ ಸಲ್ಲಿಸಿರುವ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಕೈಗೊಂಡಿರುವ ನವೀನ ಯೋಜನೆಗಳು ಹಾಗೂ ಸಮಗ್ರ ಶಿಕ್ಷಣ ಬಲವರ್ಧನೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದ್ದು, ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಶಾಸಕ ವೈ.ಎ.ನಾರಾಯಣಸ್ವಾಮಿ, ಮಾಜಿ ಸಿಎಂ ಸದಾನಂದಗೌಡ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತುಮಕೂರಿನ ಸಿದ್ದರಬೆಟ್ಟ ಮಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಬಸವಣ್ಣನವರ ತತ್ವಗಳನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತವಾಯಿತು. ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅಕ್ಕನ ಬಳಗದ ತಂಡದಿಂದ ವಚನ ಗಾಯನ ಕಾರ್ಯಕ್ರಮ ಗಮನ ಸೆಳೆಯಿತು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಬಸವ ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಸಮಾರಂಭಕ್ಕೆ ವಿಶೇಷ ಮೆರುಗು ತಂದರು.

 

ಬಸವಣ್ಣನವರ ಸಮಾನತೆ, ಕಾಯಕ ಮತ್ತು ದಾಸೋಹದ ಆದರ್ಶಗಳು ಇಂದಿನ ಸಮಾಜಕ್ಕೆ ದಿಕ್ಕು ತೋರುವ ಶಕ್ತಿಯಾಗಿದೆ. ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆ ಸಾಧ್ಯ ಎಂಬುವುದನ್ನು ಡಾ.ಹೊಸಮನಿ ಅವರ ಕಾರ್ಯಗಳು ಸಾಬೀತುಪಡಿಸುತ್ತವೆ.
-ಭೈರತಿ ಸುರೇಶ್, ನಗರಾಭಿವೃದ್ಧಿ ಸಚಿವರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್