LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ



ವಿಜಯಪುರ,ಜುಲೈ.೧೩ : : ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂ.೨೯ ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಭರದಿಂದ ನಡೆದಿದ್ದು,  ಜು.೧೨ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಪ್ರಕಾರ ಇಲ್ಲಿಯವರೆಗೆ ೧೮,೮೮,೬೫೭ ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ. ಅವುಗಳಲ್ಲಿ ೬,೪೪,೮೧೦ ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿಯಂತೆ  ಜಿಲ್ಲೆಯಲ್ಲಿ ಒಟ್ಟು ೧೯,೮೨,೧೧೪ ಮತದಾರರು ದಾಖಲಾಗಿದ್ದಾರೆ. ಇವರಿಗೆ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿ, ಅಗತ್ಯ  ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.
ಗಣತಿ ನಮೂನೆಗಳ ವಿತರಣೆ ಮತ್ತು ಡಿಜಿಟಲೀಕರಣ ಕಾರ್ಯವು ಜೂನ್.೩೦ ರಿಂದ ಜುಲೈ.೨೯ ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ  ದಾಖಲೆಗಳೊಂದಿಗೆ ನಮೂನೆಗಳನ್ನು ಸಲ್ಲಿಸಬಹುದಾಗಿದೆ.
೧,೬೭೪ ಮತದಾರರು ಆನ್ ಲೈನ್ ಮೂಲಕ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ. ೩೫೦೯ ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. ೪,೭೩೮ ಮತದಾರರು ಮೃತಪಟ್ಟಿದ್ದಾರೆ. ೧,೩೬೪ಮತದಾರರು ಈಗಾಗಲೇ ನೋಂದಾಯಿಸಿಕೊಂಡಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ.ಸಂಗ್ರಹಿಸಲಾಗದ ಅಥವಾ ಗೈರುಹಾಜರಾಗಿರುವ ಮತದಾರರು ೮೨ ಹಾಗೂ ೯೫ ಇತರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್