LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರೈತ ಭವನದಲ್ಲಿ ಅನ್ನದಾತರಿಗೆ ವಿಶೇಷ ಊಟ ವ್ಯವಸ್ಥೆ

ಬಳ್ಳಾರಿ, ಜೂನ್ 03; ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ “ರೈತಣ್ಣನ ಊಟ ಯೋಜನೆ”ಯಡಿ ಇಂದು ರೈತ ಭವನದಲ್ಲಿ ಅನ್ನದಾತರಿಗೆ ವಿಶೇಷ ಸಿಹಿ ಖಾದ್ಯ ಹಾಗೂ ಸಂಪೂರ್ಣ ಊಟದ ವ್ಯವಸ್ಥೆ ಮಾಡಲಾಯಿತು.
ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷರು, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಗುರ್‍ಹುಕುಂ ಸಮಿತಿ ಅಧ್ಯಕ್ಷರಾಗಿರುವ ಹೆಚ್. ತಿಮ್ಮನಗೌಡ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಇಂದಿನ ಊಟದ ಸಂಪೂರ್ಣ ವೆಚ್ಚವನ್ನು ವಹಿಸಿಕೊಂಡು ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು.
ಈ ಸಂದರ್ಭದಲ್ಲಿ ರೈತ ಭವನಕ್ಕೆ ಆಗಮಿಸಿದ ರೈತರು ಹಾಗೂ ಸಾರ್ವಜನಿಕರು ಹೆಚ್. ತಿಮ್ಮನಗೌಡ ಅವರ ಈ ಸೇವಾ ಮನೋಭಾವವನ್ನು ಶ್ಲಾಘಿಸಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್, ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ ಸಿ ಸುರೇಶ್ ಬಾಬು, ಪದಾಧಿಕಾರಿಗಳು ಹಾಗೂ ಸದಸ್ಯರು ತಿಮ್ಮನಗೌಡ ಅವರಿಗೆ ಹಾರ್ದಿಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿ, ಅವರ ಸಾಮಾಜಿಕ ಸೇವಾ ಕಾರ್ಯಗಳು ಇನ್ನಷ್ಟು ವಿಸ್ತರಿಸಲಿ ಎಂದು ಹಾರೈಸಿದರು.
ರೈತಣ್ಣನ ಊಟ ಯೋಜನೆಯ ಮೂಲಕ ಪ್ರತಿದಿನ ನೂರಾರು ರೈತರಿಗೆ ಉಚಿತ ಹಾಗೂ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದ್ದು, ಈ ಯೋಜನೆಗೆ ವಿವಿಧ ದಾನಿಗಳು ಮತ್ತು ಸಮಾಜಸೇವಕರು ನಿರಂತರವಾಗಿ ಸಹಕಾರ ನೀಡುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್