LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಾಲತವಾಡದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಬಿಜೆಪಿ ಮುಖಂಡರಿಂದ ಮನವಿ


ನಾಲತವಾಡ: ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ವಿವಿಧ ಮೂಲಭೂತ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ. ಸೌದಾಗರ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ ಶ್ರೀ ಶರಣ ವೀರೇಶ್ವರ ಸಮುದಾಯ ಭವನಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಲಾಗಿದೆ. ನಾಗಬೇನಾಳ ಗ್ರಾಮದಲ್ಲಿ ನಿರ್ಮಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕದ ತಡೆಗೋಡೆ ಹಾನಿಗೊಳಗಾದ ಪ್ರಕರಣದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಘಟಕಕ್ಕೆ ಸಂಪರ್ಕ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಲಾಗಿದೆ.

ಎಸ್‌ಎಸ್‌ಪಿ ವಿಶೇಷ ಅನುದಾನದಲ್ಲಿ ನಾಲತವಾಡ ಬಸ್ ನಿಲ್ದಾಣದ ಉತ್ತರ ಹಾಗೂ ಪೂರ್ವ ಭಾಗದಲ್ಲಿ ವ್ಯಾಪಾರ ಮಳಿಗೆಗಳನ್ನು ನಿರ್ಮಿಸಲು ಉದ್ದೇಶಿಸಿರುವುದರಿಂದ ಭವಿಷ್ಯದಲ್ಲಿ ಮುಖ್ಯ ರಸ್ತೆ ಹಾಗೂ ಬೈಪಾಸ್ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಸೂಕ್ತ ಸ್ಥಳವನ್ನು ಗುರುತಿಸಿ ಮಳಿಗೆಗಳನ್ನು ನಿರ್ಮಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮುದ್ದೇಬಿಹಾಳ ಮುಖ್ಯ ರಸ್ತೆಯಲ್ಲಿರುವ ಪಶು ವೈದ್ಯಕೀಯ ಕೇಂದ್ರದಿಂದ ನಾರಾಯಣಪುರ ರಸ್ತೆಯ ಪೆಟ್ರೋಲ್ ಬಂಕ್‌ವರೆಗೆ ಡಿವೈಡರ್ ಕಾಮಗಾರಿ ಪೂರ್ಣಗೊಂಡಿದ್ದು, ಅದರ ಮಧ್ಯ ಭಾಗದಲ್ಲಿ ಗಿಡಗಳನ್ನು ನೆಟ್ಟು, ರಾತ್ರಿ ವೇಳೆ ನಿರಂತರವಾಗಿ ವಿದ್ಯುತ್ ದೀಪಗಳು ಬೆಳಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇದೇ ವೇಳೆ ಖಾನಭಾವಿ ಓಣಿಯ ಜನವಸತಿ ಪ್ರದೇಶದಲ್ಲಿ ಕೊಳಚೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಕೊಳಚೆ ನೀರಿನ ಸಮಸ್ಯೆ ನಿವಾರಿಸಿ ಸ್ವಚ್ಛ ಪರಿಸರ ನಿರ್ಮಿಸಬೇಕು ಎಂದು ಮನವಿ ಮಾಡಲಾಗಿದೆ. ಮನವಿಯಲ್ಲಿರುವ ಎಲ್ಲಾ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕು. ಇಲ್ಲವಾದಲ್ಲಿ ಬಿಜೆಪಿ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಮನವಿ ಸ್ವೀಕರಿಸಿದ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ. ಸೌದಾಗರ ಮಾತನಾಡಿ, ಮನವಿಯಲ್ಲಿರುವ ಬೇಡಿಕೆಗಳನ್ನು ಪರಿಶೀಲಿಸಿ ಸಾಧ್ಯವಾದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುದ್ದೇಬಿಹಾಳ ತಹಶೀಲ್ದಾರ ಕಿರ್ತಿ ಚಾಲಕ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಶಾಂತ ಸಿ., ಬಿಜೆಪಿ ಮುಖಂಡರಾದ ಎಂ.ಬಿ. ಅಂಗಡಿ,ಖಾಜಾಹುಸೇನ ಎತ್ತಿಮನಿ, ಶಶಿಧರ ಬಂಗಾರಿ ಸಂಗಣ್ಣ ಕುಳಗೇರಿ, ಸಂಗಮೇಶ ಮೇಟಿ,  ಹಾಗೂ ಹಣಮಂತ ಚಲವಾದಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್