LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆರೋಗ್ಯವಂತ ಸಮಾಜದ ಅಡಿಪಾಯವೇ ಕ್ರೀಡೆ: ಎಲ್. ಕೆ. ತೋರಣಗಟ್ಟಿ 

 

ಮುಧೋಳ: ಜು.೧೬ :  ತಾಲೂಕಿನ ಸೋರಗಾಂವ ಗ್ರಾಮದ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ ಬುಧವಾರದಂದು ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಎಲ್. ಕೆ. ತೋರಣಗಟ್ಟಿ ಭೇಟಿ ನೀಡಿ ವಿದ್ಯಾರ್ಥಿಗಳ ಉದ್ದೇಶಿಸಿ ಮಾತನಾಡಿ,ಆರೋಗ್ಯವಂತ ಸಮಾಜದ ಅಡಿಪಾಯವೇ ಕ್ರೀಡೆ.ಮೈದಾನದಲ್ಲಿ ಕಲಿತ ಶಿಸ್ತು, ಜೀವನದ ಪ್ರತಿಯೊಂದು ಹಂತದಲ್ಲೂ ಯಶಸ್ಸಿನ ದಾರಿ ತೋರಿಸುತ್ತದೆ.ಕ್ರೀಡೆ ದೇಹವನ್ನು ಬಲಪಡಿಸಿದರೆ, ಸೋಲು-ಗೆಲುವು ಮನಸ್ಸನ್ನು ಗಟ್ಟಿಗೊಳಿಸುತ್ತದೆ. ಪ್ರತಿದಿನದ ಕ್ರೀಡೆ ಆರೋಗ್ಯಕರ ಬದುಕಿನ ಮೊದಲ ಹೆಜ್ಜೆ.ಆದರಿಂದ ಆಟದ ಸಮಯದಲ್ಲಿ ಆಟಗಳನ್ನು ಆಡುತ್ತಾ ದೈಹಿಕವಾಗಿ ಗಟ್ಟಿಗೊಳ್ಳಿ ಎಂದು ತಿಳಿಸಿದರು.

ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್. ಎಂ. ಕುರಣಿ ಅವರು ಪ್ರಾರ್ಥನಾ ಸಭೆಯಲ್ಲಿ ಹಾಜರಾಗಿ ವಿದ್ಯಾರ್ಥಿಗಳ ಶಿಸ್ತು, ಸಮಯಪಾಲನೆ ಹಾಗೂ ಪ್ರಾರ್ಥನಾ ಕಾರ್ಯಕ್ರಮವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಇರ್ವ ಅಧಿಕಾರಿಗಳು ಶಾಲೆಯ ದೈಹಿಕ ಶಿಕ್ಷಣ ಚಟುವಟಿಕೆಗಳು, ಕ್ರೀಡಾ ತರಬೇತಿ,ಕ್ರೀಡಾ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳ ಸಾಧನೆಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸಿದರು. 
ಈ ಸಂದರ್ಭದಲ್ಲಿ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾ ಬಿ ಆರ್ ಶಿರೂರ, ಶಿಕ್ಷಕರಾದ ಎಮ್ ಕೆ ಅಮ್ಮನಗಿ,ಆರ್ ಎಂ ಡೊಂಬರ,ವಿ ಎಚ್ ಗೌಡರ,ಡಿ ಎಸ್ ಪೂಜಾರ, ಎಸ್ ಎಸ್ ಜೀರಗಾಳ,ವಿ ಜಿ ಮಲಕನವರ, ಅಬ್ದುಲ್ ಸಾಬ್ ಹುಣ್ಣೂರ, ಈರಯ್ಯ ನಂದೇಗೋಳ,ಸುರೇಶ ಬೂದಿಹಾಳ,ಪರಶುರಾಮ ಜೋಗಿನವರ, ಪ್ರಶಿಕ್ಷಣಾರ್ಥಿಗಳಾದ ಅಂಜಲಿ ಹಗರಿ,ಸ್ವಾತಿ ಹೂಗಾರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು .

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್