LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ಭಗೀರಥ ಜಯಂತ್ಯೋತ್ಸವ

ಬಳ್ಳಾರಿ, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ದೊಡ್ಡದು. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸಮಾಜದ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಧ್ಯೇಯವಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ರಾಜ್ಯ ಸರ್ಕಾರವು ಸುಮಾರು 25ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ಸಮುದಾಯಗಳ ಜಯಂತಿಗಳನ್ನು ಆಚರಿಸುವ ಮೂಲಕ ಆಯಾ ಸಮಾಜದ ಮಹನೀಯರು ನೀಡಿದ ತಪಸ್ಸು, ತ್ಯಾಗ ಮತ್ತು ಮಾರ್ಗದರ್ಶನವನ್ನು ಇಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು  ಅಭಿಪ್ರಾಯಪಟ್ಟರು.
ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ, ನಗರದ ಸಂಗನಕಲ್ಲಿನ ರಸ್ತೆಯೊಂದರ ವೃತ್ತವೊಂದಕ್ಕೆ ಭಗೀರಥ ವೃತ್ತ ಎಂದು ನಾಮಕರಣ ಮಾಡಲು ಮಾಡಲು ಸರ್ಕಾರಕ್ಕೆ ಮತ್ತು ಸಂಬAಧಪಟ್ಟ ಇಲಾಖೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಈಗಾಗಲೇ ಪೊಲೀಸ್ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ದೊರೆತಿದ್ದು, ಮುಂದಿನ ಜಯಂತಿಯೊಳಗೆ ಅಧಿಕೃತವಾಗಿ ಉದ್ಘಾಟನೆ ಮಾಡಿ, ಅಲ್ಲಿಂದಲೇ ಜಯಂತಿ ಮೆರವಣಿಗೆ ಮಾಡೋಣ ಎಂದು ಭರವಸೆ ನೀಡಿದರು.
ಸಣ್ಣ ಪುಟ್ಟ ಸಮುದಾಯಗಳು ಒಂದಾಗಿ ಬಾಳಬೇಕು. ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಸಂಘಟಿತ ಹೋರಾಟ ಮತ್ತು ಕೇಳುವ ಧಾಟಿ ಮುಖ್ಯ. ನಾವು ಕೇಳುವ ವಿಧಾನ ಸರಿಯಾಗಿದ್ದರೆ ಸರ್ಕಾರ ಖಂಡಿತ ಸ್ಪಂದಿಸುತ್ತದೆ ಎಂದು ತಮ್ಮ ಆಶಯ ವ್ಯಕ್ತಪಡಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಉಪ್ಪಾರ ಸಮುದಾಯದವರು ಇತರರಿಗಾಗಿ ದುಡಿಯುವುದರಲ್ಲಿ ಮತ್ತು ಇತರರ ಕೆಲಸಗಳನ್ನು ಮಾಡಿಕೊಡುವುದರಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಆದರೆ ಸ್ವಂತ ಸಮುದಾಯದ ರಾಜಕೀಯ ಬೆಳವಣಿಗೆಗೆ ಶ್ರಮಿಸುತ್ತಿಲ್ಲ. ಈ ಧೋರಣೆ ಬದಲಾಗಬೇಕಿದೆ ಮತ್ತು ನಮ್ಮ ಹಕ್ಕುಗಳಿಗಾಗಿ ನಾವು ಒಂದಾಗಬೇಕಿದೆ ಎಂಬ ಹೇಳಿದರು.
ಐತಿಹಾಸಿಕ ಕೊಡುಗೆ ಮತ್ತು ಶ್ರಮಿಕ ಸಂಸ್ಕೃತಿ ಉಪ್ಪಾರ ಮತ್ತು ಗಂಗಾಮತಸ್ಥ ಸಮುದಾಯಗಳ ದೇಶಪ್ರೇಮ ಹಾಗೂ ಶ್ರಮಿಕ ಗುಣವನ್ನು ಅಳವಡಿಸಿಕೊಂಡವರು ಎಂದು ಒತ್ತಿ ಹೇಳಿದ ಅವರು, ಮುಂಬರುವ ದಿನಗಳಲ್ಲಿ ಎಲ್ಲಾ ಹಿಂದುಳಿದ ಮತ್ತು ಶೋಷಿತ ವರ್ಗಗಳು ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಒಗ್ಗೂಡಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಂಗನಕಲ್ಲಿನ ನಿವೃತ ಶಿಕ್ಷಕ ಕೆ.ಬಿ.ಸಿದ್ದಲಿಂಗಪ್ಪ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಮಹರ್ಷಿ ಭಗೀರಥರು ತೀವ್ರ ತಪಸ್ಸಿನ ಮೂಲಕ ಸ್ವರ್ಗದಲ್ಲಿದ್ದ ಗಂಗಾನದಿಯನ್ನು ಭೂಮಿಗೆ ತಂದ ಪೌರಾಣಿಕ ರಾಜ. ಛಲ, ಪರಿಶ್ರಮ ಮತ್ತು ಜಲ ಸಂರಕ್ಷಣೆಯ ಸಂಕೇತವಾಗಿ ಇವರನ್ನು ಸ್ಮರಿಸಲಾಗುತ್ತದೆ. ಅಸಾಧ್ಯವಾದುದನ್ನು ಸಾಧಿಸುವ ವ್ಯಕ್ತಿತ್ವಕ್ಕೆ ಭಗೀರಥರು ಉದಾಹರಣೆಯಾಗಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಮುಖಂಡರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು. ಕಂಪ್ಲಿಯ ಶೈಲಾ ದೇವರಮನಿ ತಂಡ ಭಕ್ತಿ ಸಂಗೀತ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಸಂವಿಧಾನ ಪೀಠಿಕೆ ಬೋಧಿಸಲಾಯಿತು.
*ಸಂಭ್ರಮದ ಮೆರವಣಿಗೆ:*
ಶ್ರೀ ಭಗೀರಥ ಜಯಂತಿ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆಯು ನಗರದಲ್ಲಿ ಸಂಭ್ರಮದಿAದ ಜರುಗಿತು. ಮೆರವಣಿಗೆಗೆ ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ಚಾಲನೆ ನೀಡಿದರು.
ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನೊಳಗೊAಡ ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ರೈಲ್ವೇ ನಿಲ್ದಾಣ ರಸ್ತೆ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ದವರೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರ ಕಚೇರಿಯ ತಹಶೀಲ್ದಾರ್ ಶಾಷಾವಲಿ, ಗ್ರೇಡ್-2 ತಹಶೀಲ್ದಾರ್ ವಿನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್