LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಾಹಿತ್ಯ ಸೇವೆಗೆ ವೆಂಕಟೇಶ್ ಬಡಿಗೇರ್‌ಗೆ ಶ್ರೀ ವಾಲ್ಮೀಕಿ ಕಲಾ ಸೇವೆ ರಾಷ್ಟ್ರೀಯ ಪ್ರಶಸ್ತಿ

ಹೊಸಪೇಟೆ, ಜೂ.30: ಸಾಹಿತ್ಯ, ಕನ್ನಡ ನಾಡು-ನುಡಿ ಹಾಗೂ ಸಾಂಸ್ಕೃತಿಕ ಸೇವೆಯನ್ನು ಗುರುತಿಸಿ ಕುಮಲಾಪುರ ಗ್ರಾಮದ ಸಾಹಿತಿ ಶ್ರೀ ವೆಂಕಟೇಶ್ ಬಡಿಗೇರ್ ಅವರಿಗೆ ಶ್ರೀ ವಾಲ್ಮೀಕಿ ಕಲಾ ಸೇವೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಹೊಸಪೇಟೆಯ ಬಳ್ಳಾರಿ ರಸ್ತೆಯ ಶ್ರೀ ಪುಣ್ಯಾನಂದ ಪುರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಶ್ರೀ ವಾಲ್ಮೀಕಿ ಮಹಿಳಾ ಕಲಾ ಸಂಸ್ಥೆ (ರಿ), ಹೊಸಪೇಟೆ, ವಿಜಯನಗರ ಜಿಲ್ಲೆ ವತಿಯಿಂದ ಆಯೋಜಿಸಿದ್ದ 13ನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಮಕ್ಕಳ ಸಾಹಿತ್ಯ ಪರಿಷತ್ತಿನ ವಿಜಯನಗರ ಜಿಲ್ಲಾಧ್ಯಕ್ಷರು, ಗುರುಕುಲ ಕಲಾ ಪ್ರತಿಷ್ಠಾನದ ಜಿಲ್ಲಾಧ್ಯಕ್ಷರು, ಕರ್ನಾಟಕ ಸಾಹಿತ್ಯ ಅಕಾಡೆಮಿ ಚೇತನ ವಿಚಾರ ಸಾಹಿತ್ಯ ವೇದಿಕೆಯ ವಿಜಯನಗರ ಜಿಲ್ಲಾ ಸಂಚಾಲಕರಾಗಿರುವ ವೆಂಕಟೇಶ್ ಬಡಿಗೇರ್ ಅವರು 'ಕಲ್ಲು ತೇರಿನ ಕುಸುರಿ' ಕವನ ಸಂಕಲನ ಪ್ರಕಟಿಸಿದ್ದು, ಸಾಹಿತ್ಯ, ಕನ್ನಡ ಭಾಷೆ, ನಾಡು-ನುಡಿ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಂಸ್ಥೆಯ ಅಧ್ಯಕ್ಷೆ ಅನುರಾಧ ವಾಲ್ಮೀಕಿ ಅವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ತಹಸೀಲ್ದಾರ್ ವೆಂಕನಗೌಡ ಆರ್. ಪಾಟೀಲ್, ಕನ್ನಡ ವಿಶ್ವವಿದ್ಯಾಲಯ ಹಂಪಿಯ ಕುಲಸಚಿವ ಡಾ. ಪೂಜಾರಹಳ್ಳಿ ವಿರೂಪಾಕ್ಷಪ್ಪ, ಆಧ್ಯಾತ್ಮಿಕ ಚಿಂತಕ ವೆಂಕೋಬ ಶೆಟ್ಟಿ, ಸಾಹಿತಿ ಡಾ. ಅನಸೂಯ ಕೆಂಪನಹಳ್ಳಿ, ಚಿತ್ರಕಲಾವಿದ ಶಿವಬಸಪ್ಪ ಹು., ಕೆ.ಪಿ. ಉಮಾಪತಿ, ಕರ್ನಾಟಕ ನಾಟಕ ಅಕಾಡೆಮಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸದ್ಯೋಜಾತ ಶಾಸ್ತ್ರಿ ಹಿರೇಮಠ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಹಿರಿಯ ಕಾಂಗ್ರೆಸ್ ಮುಖಂಡ ಗುಜ್ಜಲ ನಾಗರಾಜ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ವಾಲ್ಮೀಕಿ ನಾಯಕ ಸಮಾಜದ ಉಪಾಧ್ಯಕ್ಷ ಕಿನ್ನಾಳ ಹನುಮಂತಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಮಹಮ್ಮದ್ ರಫೀಕ್ ನಿರೂಪಿಸಿದರು. ಶ್ರೀ ಸಾವಿತ್ರಮ್ಮ ಕಲಾತಂಡದ ವೇಷಧಾರಿ ಡೊಳ್ಳು ಕುಣಿತ ಹಾಗೂ ಭರತನಾಟ್ಯ ಕಲಾವಿದರ ಮನಮೋಹಕ ಪ್ರದರ್ಶನಗಳು ಪ್ರಮುಖವಾಗಿ ಕಂಡವು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್