LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಶ್ರೀಮುರಳಿ ಚಿತ್ರ ಉಗ್ರಾಯುಧಮ್  ಅದ್ದೂರಿ ಚಾಲನೆ



     ಸುರಮ್ ಮೂವೀಸ್ ಲಾಂಛನದಲ್ಲಿ  ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿರುವ 'ಉಗ್ರಾಯುಧಮ್' ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು.

      ಶ್ರೀಮುರಳಿ ಅವರ ತಂದೆ, ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ  ಅವರು ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಇವರು ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಜೊತೆಗೂಡಿ ಶೀರ್ಷಿಕೆ ಅನಾವರಣ ಮಾಡಿದರು.

     ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ಮಾತನಾಡಿ "ಇಂತಹ ಪಿರಿಯಾಡಿಕ್ ಡ್ರಾಮ ಕಥಾಹಂದರ ಹೊಂದಿರುವ ಚಿತ್ರವನ್ನು ನಮ್ಮ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. ಈಗ ಸಾಕಷ್ಟು ಕನ್ನಡದ ಚಿತ್ರಗಳು ವಿಶ್ವಮಟ್ಟದಲ್ಲಿ ಹೆಸರು ಮಾಡುತ್ತಿದೆ. ಆ ಸಾಲಿಗೆ ನಮ್ಮ ಚಿತ್ರ ಕೂಡ ಸೇರುವ ಭರವಸೆ ಇದೆ. ನಮ್ಮ ಚಿತ್ರದ ನಾಯಕರಾದ ಶ್ರೀಮುರಳಿ ಹಾಗೂ ನಿರ್ದೇಶಕ ಪುನೀತ್ ರುದ್ರನಾಗ್ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ" ಎಂದರು.

     "ನಾನು ಚಿತ್ರರಂಗಕ್ಕೆ ಬಂದಾಗಿನಿಂದ ನನಗೆ ಪ್ರೋತ್ಸಾಹ ನೀಡುತ್ತಾ ಬಂದವರು ಶ್ರೀಮುರಳಿ ಹಾಗೂ ಕುಟುಂಬದವರು. ಇಂದು ನನ್ನ ಮೊದಲ ನಿರ್ದೇಶನದ 'ಉಗ್ರಾಯುಧಮ್' ಚಿತ್ರಕ್ಕೆ ಶ್ರೀಮುರಳಿ ಅವರೆ ನಾಯಕನಾಗಿರುವುದು ಸಂತಸ ತಂದಿದೆ. ಇನ್ನೂ ಇದೊಂದು ಏಳುನೂರು ವರ್ಷಗಳ ಹಿಂದಿನ ಪಿರಿಯಾಡಿಕ್ ಡ್ರಾಮ  ಕಥಾಹಂದರ ಹೊಂದಿರುವ ಚಿತ್ರ. ನವೆಂಬರ್ ನಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಸಕಲೇಶಪುರದ ಬಳಿ 135 ಎಕರೆ ವಿಸ್ತೀರ್ಣದ ಭೂಮಿಯಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದ್ದು, ಅಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ನಾನು ಡಾ.ರಾಜಕುಮಾರ್ ಅವರ ಅಪ್ಪಟ ಅಭಿಮಾನಿ. ಅವರ ಅಭಿನಯದ ಸಾಕಷ್ಟು ಐತಿಹಾಸಿಕ ಚಿತ್ರಗಳನ್ನು ನೋಡಿದ್ದೇನೆ. ಅದೇ ನನಗೆ ಈ ಚಿತ್ರ ನಿರ್ದೇಶನ ಮಾಡಲು ಸ್ಪೂರ್ತಿ. ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ನಮ್ಮ ಚಿತ್ರದಲ್ಲಿ ಅನುಭವಿ ಕಲಾವಿದರ ಹಾಗೂ ತಂತ್ರಜ್ಞರ ದೊಡ್ಡ ತಂಡ ಇದೆ. ಮುಂದಿನ ದಿನಗಳಲ್ಲಿ ಈ ಕುರಿತು ಮಾಹಿತಿ ನೀಡಲಾಗುವುದು" ಎಂದು ನಿರ್ದೇಶಕ ಪುನೀತ್ ರುದ್ರನಾಗ್ ತಿಳಿಸಿದರು .

     "ನಾನು 'ಬಘೀರ' ಚಿತ್ರದ ನಂತರ ಸುಮಾರು 200 ಕಥೆ ಕೇಳಿದ್ದೇನೆ. ಅದರಲ್ಲಿ ನನಗೆ ಇಷ್ಟ ಆಗಿದ್ದು ಮೂರು ಕಥೆಗಳು ಮಾತ್ರ. ಆ ಪೈಕಿ ಎರಡು ಚಿತ್ರಗಳ ಮುಹೂರ್ತ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಇತ್ತೀಚೆಗೆ ನೆರವೇರಿದೆ. 'ಬಘೀರ' ನಂತರ ಬಿಡುಗಡೆಯಾಗುತ್ತಿರುವ ಶ್ರೀಮುರಳಿ ಅವರ ಚಿತ್ರ ಯಾವುದು ಅಂತ ಕೇಳಿದರೆ, ಅದು 'ಉಗ್ರಾಯುಧಮ್' ಅಂತ ಹೇಳಬಹುದು. ನಿರ್ದೇಶಕ ಪುನೀತ್ ರುದ್ರನಾಗ್ 700 ವರ್ಷಗಳ ಹಿಂದಿನ ಕಥೆಯನ್ನು ತೆರೆಯ ಮೇಲೆ ತರಲು ಮುಂದಾಗಿದ್ದಾರೆ. ನಿಜಕ್ಕೂ ಅವರು ಮಾಡಿಕೊಂಡಿರುವ ಕಥೆ ಬಹಳ ಚೆನ್ನಾಗಿದೆ. ಪಿರಿಯಾಡಿಕ್ ಡ್ರಾಮ ಕಥಾಹಂದರವನ್ನು  ಚಿತ್ರ ಹೊಂದಿದೆ. ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ಸಹ ಅದ್ದೂರಿಯಾಗಿ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ಒಂದೊಳ್ಳೆ ಚಿತ್ರ ನಿಮ್ಮ ಮುಂದೆ ಬರುವುದಂತು ಖಂಡಿತ. ಆದಷ್ಟು ಬೇಗ ಈ ಚಿತ್ರ ತೆರೆಗೆ ಬರಲಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಹಂತಹಂತವಾಗಿ ನೀಡುತ್ತೇವೆ" ಎಂದರು ನಾಯಕ ಶ್ರೀಮುರಳಿ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್