LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎಸ್​ಎಸ್​ಎಲ್​ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

ಬೆಂಗಳೂರು, ಆಗಸ್ಟ್​.26: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು  ಎಸ್​ಎಸ್​ಎಲ್​ಸಿ ಪರೀಕ್ಷೆ-3ರ ಫಲಿತಾಂಶವನ್ನು ಇಂದು (ಆಗಸ್ಟ್ 26) ಪ್ರಕಟಿಸಿದೆ. ಮಧ್ಯಾಹ್ನ 12 ಗಂಟೆ ಬಳಿಕ https://karresults.nic.in ಜಾಲತಾಣದಲ್ಲಿ ಫಲಿತಾಂಶ ಬಿಡಲಾಗಿದೆ. ಫಲಿತಾಂಶಗಳನ್ನು ಪರಿಶೀಲಿಸಲು ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ, ವಿವರಗಳನ್ನು ನಮೂದಿಸಬೇಕಾಗುತ್ತದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ-3 ಇದೇ ತಿಂಗಳ ಆಗಸ್ಟ್​ 2 ರಿಂದ 9ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.


ಇದಕ್ಕೂ ಮೊದಲು, ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಮತ್ತು 1 ಫಲಿತಾಂಶಗಳನ್ನು ಜುಲೈ 10 ಮತ್ತು ಮೇ 9, 2024 ರಂದು ಪ್ರಕಟಿಸಲಾಗಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ಕ್ಕೆ ಒಟ್ಟು 2,23,293 ವಿದ್ಯಾರ್ಥಿಗಳು ಹಾಜರಾಗಿದ್ದು, 69,275 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 31.02 ರಷ್ಟು ಉತ್ತೀರ್ಣರಾಗಿದ್ದಾರೆ.

ಅದರಂತೆಯೇ, ಪರೀಕ್ಷೆ 1 ರಲ್ಲಿ, ಒಟ್ಟು 8,59,967 ವಿದ್ಯಾರ್ಥಿಗಳು ಹಾಜರಾಗಿದ್ದರು. ಅವರಲ್ಲಿ 6,31,204 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. 73.40 ರಷ್ಟು ಉತ್ತೀರ್ಣರಾಗಿದ್ದಾರೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್