LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ  ಕೃಷಿ ವಿಜ್ಞಾನ ಕೇಂದ್ರಕ್ಕೆ  ಭೇಟಿ.

ನೇಸರಗಿ. ಇಲ್ಲಿನ ಶ್ರೀ ಗಾಳೇಶ್ವರ ಮಠದ  ಶ್ರೀ ರೇವಣಸಿದ್ದೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ  ನೇಸರಗಿ - ಮಲ್ಲಾಪೂರ ಇದರ    ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯದಲ್ಲಿರುವ "ಅಸಿ ಮಸಿ ಕೃಷಿ" ಪಾಠದ ಅನುಭವಾತ್ಮಕ ಕಲಿಕೆಯ ಅಂಗವಾಗಿ ಹತ್ತಿರದ ಮತ್ತಿಕೊಪ್ಪ ಗ್ರಾಮದ ಕೆ ಎಲ್ ಇ  *ಕೃಷಿ ವಿಜ್ಞಾನ ಕೇಂದ್ರಕ್ಕೆ* ಶೈಕ್ಷಣಿಕ ಭೇಟಿ ಏರ್ಪಡಿಸಲಾಯಿತು.
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳಾದ ವಾರದ ಮತ್ತು  ವಿನೋದ ಅವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ದೇಶದ ಅಭಿವೃದ್ಧಿಯಲ್ಲಿ ರೈತರ ಪಾತ್ರ ಮತ್ತು ಕೃಷಿಯ ಮಹತ್ವದ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು.
ಅಲ್ಲದೆ, ತಮ್ಮ ಸಂಶೋಧನಾ ಕೇಂದ್ರದಲ್ಲಿರುವ ವಿವಿಧ ದ್ವಿದಳ ಧಾನ್ಯಗಳ ತಳಿಗಳು, ಅವುಗಳ ವೈಶಿಷ್ಟ್ಯಗಳು ಹಾಗೂ ಆಧುನಿಕ ಕೃಷಿ ಉಪಕರಣಗಳು ಮತ್ತು ಯಂತ್ರೋಪಕರಣಗಳ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.
ಮಣ್ಣಿನ ಸಂರಕ್ಷಣೆ, ಮಣ್ಣಿನ ಫಲವತ್ತತೆ ಕಾಪಾಡುವ ವಿಧಾನಗಳು, ಮಣ್ಣಿನ ಪರೀಕ್ಷೆ ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಇದರಿಂದ ವೈಜ್ಞಾನಿಕ ಕೃಷಿಯ ಮಹತ್ವವನ್ನು ವಿದ್ಯಾರ್ಥಿಗಳು ನೇರವಾಗಿ ಅರಿತುಕೊಂಡರು.
ಸಾವಯವ ಕೃಷಿಯ ಕುರಿತು ಪಂಚಗವ್ಯ ಹಾಗೂ ಜೀವಾಮೃತ ತಯಾರಿಸುವ ವಿಧಾನಗಳನ್ನು ವಿವರಿಸಿ, ಅವುಗಳ ಉಪಯೋಗ ಮತ್ತು ಪ್ರಯೋಜನಗಳನ್ನು ತಿಳಿಸಿದರು.
ಇದರ ಜೊತೆಗೆ ತೋಟಗಾರಿಕೆ, ಹೈನುಗಾರಿಕೆ, ಕೃಷಿ ಹೊಂಡ ನಿರ್ಮಾಣ, ನೀರಿನ ಸಂರಕ್ಷಣೆ ಹಾಗೂ ಸಮಗ್ರ ಕೃಷಿ ಪದ್ಧತಿಗಳ ಕುರಿತು ಮಾಹಿತಿ ನೀಡಿದರು.
 ಈ ಶೈಕ್ಷಣಿಕ ಭೇಟಿಯು ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಆಸಕ್ತಿ, ಅರಿವು ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸುವಲ್ಲಿ ಅತ್ಯಂತ ಉಪಯುಕ್ತವಾಯಿತು.
ಈ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿ ಡಾ. ಮಂಜುನಾಥ ಚೌರಡ್ಡಿ, ಡಾ. ಎಸ್ ಎಸ್ ಹಿರೇಮಠ, ಡಾ. ಬಿ ಡಿ ಬಿರಾದಾರ, ಶಾಲೆಯ ಮುಖ್ಯ ಶಿಕ್ಷಕರಾದ ಶರಣು ಮಾದಾಪುರಮಠ  ಹಾಗೂ ಸಿಬ್ಬಂದಿ, ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ