LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬುಡಾ ಅಧ್ಯಕ್ಷರ  ಮೂಲಕ ರಾಜ್ಯ  ಸಿ. ಎಂ  ಡಿ.ಕೆ ಶಿವಕುಮಾರ್ ಗೆ  ಅತಿಥಿ ಉಪನ್ಯಾಸಕರ ಮನವಿ 

ಬಳ್ಳಾರಿ. ಜೂ. 16::   ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ 10 - 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಿ, ಅವರ ಜೀವನಕ್ಕೆ ಭದ್ರತೆ ಒದಗಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಬುಡಾ ಅಧ್ಯಕ್ಷ ಆಂಜಿನೆಲು ಅವರ ಮೂಲಕ ರಾಜ್ಯ ಸರ್ಕಾರ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದರು.
ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳಾದ D. K. ಶಿವಕುಮಾರ್ ಅವರಿಗೆ ಬರೆದಿರುವ ಮನವಿಯನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ J. S. ಆಂಜನೇಯಲು ಅವರ ಮೂಲಕ ಸಲ್ಲಿಸಲಾಯಿತು.
ಮನವಿಯಲ್ಲಿ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಲ್ಪ ಸಂಭಾವನೆಯಲ್ಲೇ ಬದುಕು ಸಾಗಿಸುವ ಪರಿಸ್ಥಿತಿ ಎದುರಾಗಿದೆ. ಹಿಂದೆ 10 ತಿಂಗಳ ಸೇವಾ ಅವಧಿಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಈಗ ಅದನ್ನು ಎಂಟು ತಿಂಗಳಿಗೆ ಇಳಿಸಿರುವುದರಿಂದ ಆರ್ಥಿಕ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ ಎಂದು ಅತಿಥಿ ಉಪನ್ಯಾಸಕರು ಅಳಲು ತೋಡಿಕೊಂಡಿದ್ದಾರೆ.
ಸೇವೆಯಿಂದ ಬಿಡುಗಡೆ ಮಾಡಿದ ಬಳಿಕವೂ ಪರೀಕ್ಷಾ ಕಾರ್ಯಗಳು ಸೇರಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗಳಿಗೆ ಕಾಲೇಜು ಆಡಳಿತ ಮಂಡಳಿಗಳು ತಮ್ಮ ಸೇವೆಯನ್ನು ಬಳಸಿಕೊಳ್ಳುತ್ತಿವೆ. ಆದರೆ ಅದಕ್ಕೆ ತಕ್ಕಂತೆ ಸೇವಾ ಭದ್ರತೆ ಅಥವಾ ಸೂಕ್ತ ಸೌಲಭ್ಯಗಳು ದೊರೆಯುತ್ತಿಲ್ಲ. ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ಮನೆ ಬಾಡಿಗೆ, ವೈದ್ಯಕೀಯ ವೆಚ್ಚ ಹಾಗೂ ದಿನನಿತ್ಯದ ಖರ್ಚುಗಳನ್ನು ಭರಿಸುವುದು ದುಸ್ತರವಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಯುಜಿಸಿ ಮತ್ತು ನಾನ್-ಯುಜಿಸಿ ಎಂಬ ತಾರತಮ್ಯ ಮಾಡದೆ ಎಲ್ಲ ಅತಿಥಿ ಉಪನ್ಯಾಸಕರ ಸೇವೆಯನ್ನು ಸಕ್ರಮಗೊಳಿಸಿ ಖಾಯಂ ನೇಮಕಾತಿಗೆ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರ ಸೇವೆ ಖಾಯಂಗೊಳಿಸುವ ಭರವಸೆ ನೀಡಲಾಗಿತ್ತು. ಆ ಭರವಸೆಯನ್ನು ಈಡೇರಿಸಿ, ರಾಜ್ಯದ ಸಾವಿರಾರು ಅತಿಥಿ ಉಪನ್ಯಾಸಕರಿಗೆ ಶಾಶ್ವತ ಉದ್ಯೋಗ ಭದ್ರತೆ ಕಲ್ಪಿಸುವ ಮೂಲಕ ಅವರ ಜೀವನಕ್ಕೆ ನೆಮ್ಮದಿ ನೀಡಬೇಕು ಎಂದು ಸರ್ಕಾರವನ್ನು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕಾಲೇಜಿನ ಅತಿಥಿ ಉಪನ್ಯಾಸಕರಾದ ಡಾ.ಟಿ ದುರುಗಪ್ಪ, ಡಾ. ಹನುಮೇಶ, ರಫೀಕ್, ಸಿದ್ದೇಶ್, ಡಾ.ಬಸಪ್ಪ, ಡಾ. ಗಿರೀಶ್ ಕುಮಾರ್ ಗೌಡ, ಮಾರೆಪ್ಪ,  ಕುಮಾರಸ್ವಾಮಿ ಮತ್ತು ಇನ್ನೀತರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್