LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಜ್ಯ ಮಟ್ಟದ “ಹುಲಿಕುಂಟೆ ಶ್ರೀ” ಪ್ರಶಸ್ತಿ ಪ್ರದಾನ ; ಕೆ ಹೊನ್ನೂರ್ ಸ್ವಾಮಿ 







ಬಳ್ಳಾರಿ. ಮಾ. 28: : ಶ್ರೀ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡ (ರಿ), ಬಳ್ಳಾರಿ ವತಿಯಿಂದ ಖ್ಯಾತ ತೊಗಲುಗೊಂಬೆ ಕಲಾವಿದರಾದ ದಿವಂಗತ ಶ್ರೀ ಹುಲೆಪ್ಪನವರ ಸ್ಮರಣಾರ್ಥ ರಾಜ್ಯ ಮಟ್ಟದ “ಹುಲಿಕುಂಟೆ ಶ್ರೀ” ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇದೇ 29ರಂದು ಸಂಜೆ 6 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ತಂಡದ ಅಧ್ಯಕ್ಷರಾದ ಕೆ. ಹೊನ್ನೂರಸ್ವಾಮಿ ತಿಳಿಸಿದರು.


 ಅವರು ಇಂದು ನಗರದ  ಜಿಲ್ಲಾಧಿಕಾರಿ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿ,  ತೊಗಲುಗೊಂಬೆ ಸೇರಿದಂತೆ ಜನಪದ ಕಲೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ  ಸೇವೆ ಸಲ್ಲಿಸಿದ  27 ಜನರಿಗೆ ರಾಜ್ಯ ಮಟ್ಟದ “ಹುಲಿಕುಂಟೆ ಶ್ರೀ” ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.


 ಸಂಡೂರಿನ ವಿರಕ್ತ ಮಠದ  ಶ್ರೀ ಮ.ನಿ.ಪ್ರ. ಪ್ರಭು ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು,  ಮಾಜಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ  ಮಧುಸೂಧನ ಕಾರಿಗನೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜೆ.ಟಿ. ಫೌಂಡೇಷನ್ ಅಧ್ಯಕ್ಷ ತಿಮ್ಮಪ್ಪ ಜೋಳದರಾಶಿ ಅಧ್ಯಕ್ಷತೆ ವಹಿಸಲಿದ್ದಾರೆ. ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ವಿ. ದೊಡ್ಡ ಕೇಶವ ರೆಡ್ಡಿ ಸೇರಿದಂತೆ ಹಲವು ಗಣ್ಯರು ಘನ ಉಪಸ್ಥಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ, ಪ್ರೊ. ಎನ್. ಶಾಂತನಾಯ್ಕ, ಡಾ. ರಾಮ್ ಕಿರಣ್ ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತ ಕೆ.ಎಂ. ಮಂಜುನಾಥ ಉಪಸ್ಥಿತರಿರಲಿದ್ದಾರೆ.

ಇದೇ ಸಂದರ್ಭದಲ್ಲಿ

 ಮಲ್ಲಿಕಾರ್ಜುನ ತುರುವನೂರು ಇವರಿಂದ ಸುಗಮ ಸಂಗೀತ,    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೃತ್ಯಗುರು ಎಸ್.ಕೆ.ಆರ್. ಜಿಲಾನಿ ಬಾಷಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಲ್ಲಿಕಾರ್ಜುನ ಸ್ವಾಮಿ ಮತ್ತು ತಂಡದ ವತಿಯಿಂದ   ರೇಣುಕ ಯಲ್ಲಮ್ಮ ಮಹಾತ್ಮ ಬಯಲಾಟ ಪ್ರದರ್ಶನ ಜರಗಲಿವೆ ಎಂದರು.


 ಕಾರ್ಯಕ್ರಮವನ್ನು ಬಸವರಾಜ ಅಮಾತಿ ಮತ್ತು ವಿಷ್ಣು ಹಡಪದ ನಿರೂಪಿಸಲಿದ್ದಾರೆ ಎಂದು ಹೊನ್ನೂರಸ್ವಾಮಿ ಮಾಹಿತಿ ನೀಡಿದರು. ಈ ಪತ್ರಿಕಾಗೋಷ್ಠಿಯಲ್ಲಿ ಈ ಸುದ್ದಿಗೋಷ್ಠಿಯಲ್ಲಿ

ಎರಿಸ್ವಾಮಿ ತೊಗಲುಗೊಂಬೆ ಕಲಾ ಟ್ರಸ್ಟ್ ಅಧ್ಯಕ್ಷ ವೈ ಪ್ರಭು ಇದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್