LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎಲ್ ನಿನೋ ಪರಿಣಾಮ ಎದುರಿಸಲು ರಾಜ್ಯ ಸಜ್ಜಾಗಿದೆ: ಈಶ್ವರ ಖಂಡ್ರೆ

* ಜನರು ಹಿತಮಿತವಾಗಿ ನೀರು ಬಳಸಬೇಕು, ಸೋರಿಕೆ ತಡೆಯಬೇಕು- ಖಂಡ್ರೆ

* ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ. ಬಿಡುಗಡೆ: ಈಶ್ವರ ಖಂಡ್ರೆ

ಬೆಂಗಳೂರು, ಜು 2: ಎನ್ ನಿ ನೋ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ, ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸುಮಾರು 85 ಕೋಟಿ ರೂಪಾಯಿಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ. ಖಾಸಗಿ ತೆರೆದ ಬಾವಿ, ಬೋರ್ ವೆಲ್ ಗಳಿಂದ ನೀರುಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ತೀರಾ ಅಗತ್ಯಬಿದ್ದ ಸಂದರ್ಭದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 2-3 ದಿನದಿಂದ ಮಳೆ ಆಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಬರುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಜೀವಜಲವನ್ನು ಹಿತಮಿತವಾಗಿ ಜನರು ಬಳಸಬೇಕು. ಪೋಲು ಮಾಡಬಾರದು ಎಂದು ಮನವಿ ಮಾಡಿದ ಅವರು, ಪಂಚಾಯ್ತಿಗಳು ನೀರು ಸೋರಿಕೆ ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್