LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

* *ಸರ್ಕಾರದ ಕರಡು ನಿಯಮಗಳ ವಿರುದ್ಧ ರಾಜ್ಯ ವ್ಯಾಪಿ  ಉಪನ್ಯಾಸಕರ ಹೋರಾಟ*

ಕೊಪ್ಪಳ/ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ಸ್ಥಾನ ಪಲ್ಲಟ ಗೊಳಿಸುವ ಸರ್ಕಾರದ ಕ್ರಮ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸಗುವ ನೇರ ದಾಳಿ ಯಾಗಿಧೆ ಎಂದು ಆರೋಪಿಸಿ ಸರ್ಕಾರದ ಕರಡು ನಿಯಮಗಳ ವಿರುದ್ಧ ರಾಜ್ಯ ವ್ಯಾಪಿ ಹೋರಾಟ ಬರುವ ಜುಲೈ ಮೊದಲ ವಾರದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ  ಹಾಗೂ ಉಪನ್ಯಾಸಕರ ಸಂಘದ ಅಧ್ಯಕ್ಷ ಬಸಪ್ಪ ನಾಗೋಲಿ ತಿಳಿಸಿದ್ದಾರೆ, 
ಅವರು ಬುಧವಾರ ನಗರದಲ್ಲಿರುವ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಸರ್ಕಾರದ ಕ್ರಮವನ್ನು ಖಂಡಿಸಿ ಬೃಹತ್ ಪ್ರತಿಭಟನೆ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು, 
ಮುಂದುವರೆದು ಮಾತನಾಡಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಭೋದಿಸಲು ಪಿಯು ಉಪನ್ಯಾಸಕರನ್ನು ನಿಯೋಜಿಸುವ ಉದ್ದೇಶದಿಂದ ಸರ್ಕಾರ ಹೊರಡಿಸಿರುವ ಕರಡು ನಿಯಮ ನೀತಿ ವನ್ನು  ನಮ್ಮ ಸಂಘ ತೀವ್ರವಾಗಿ ಖಂಡಿಸುತ್ತಿದೆ ಕೂಡಲೇ ಸರ್ಕಾರ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು, ಇದು ವಿದ್ಯಾರ್ಥಿಗಳ ಹಿತಾಸಕ್ತಿಯ ಮೇಲಿನ ನೇರ ದಾಳಿ ಆಗಿದೆ ಕೇವಲ ಉಪನ್ಯಾಸಕ ವೃಂದದ ಸೇವಾ ಸಮಸ್ಯೆ ಅಲ್ಲ ವೃತ್ತಿರಿಕ್ತವಾಗಿ ಕರ್ನಾಟಕದ ಸಾರ್ವಜನಿಕ ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ಅಂಧಕಾರದ ಕೋಪಕ್ಕೆ ತಳ್ಳುವ ಅತ್ಯಂತ ಗಂಭೀರ ವಿಷಯ ಇದಾಗಿದೆ ಎಂದು ಹೇಳಿದ ಅವರು ಕೂಡಲೇ ಸರ್ಕಾರ ಕೂಲಂಕುಶವಾಗಿ ಆಲೋಚಿಸಿ ಸೂಕ್ತವಾದಂತ ನಿರ್ಧಾರ ಕೈಗೊಳ್ಳಬೇಕು ಮತ್ತು ಸದರಿ ಕರಡು ನಿಯಮಗಳ ಆದೇಶ ಕೈಬಿಡಬೇಕೆಂದು ಹೇಳಿ ಪಿ ಯು ಉಪನ್ಯಾಸಕರಿಗೆ ನ್ಯಾಯ ದೊರಕಿಸಿ ಕೊಡಲು ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಹಾಗೂ ಉಪನ್ಯಾಸಕರ  ಸಂಘದ ಅಧ್ಯಕ್ಷ ಬಸಪ್ಪ ನಾಗೋಲಿ ಒತ್ತಾಯಿಸಿದ್ದಾರೆ, 
ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಗೌಡ ಸಂಘದ ಪದಾಧಿಕಾರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕಿನ್ನಾಳಿನ  ಪ್ರಚಾರ್ಯ ರಾಜಶೇಖರ ಪಾಟೀಲ್, ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯನಗರ ಪದವಿಪೂರ್ವ ಕಾಲೇಜ್ ಮುನಿರಾಬಾದಿನ ಪ್ರಾಚಾರ್ಯ ಬಸವರಾಜ್, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಕೊಪ್ಪಳದ ಪ್ರಾಚಾರ್ಯ ಶಿವಾನಂದ , ಬಂಡಿ ಹರ್ಲಾಪುರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯಮಂಜುನಾಥ್, ಎಸ್ ಕೆ ಆರ್ ಪಿ ಯು ಕಾಲೇಜು ಗಂಗಾವತಿಯ  ಪ್ರಾಚಾರ್ಯ ಶಿವಾನಂದ ಮೇಟಿ, ಉಪನ್ಯಾಸಕರ ಸಂಘದ ರಾಜ್ಯ ಕಾರ್ಯದರ್ಶಿ ಭೀಮಪ್ಪ ಗೊಲ್ಲರ್, ಉಪನ್ಯಾಸಕರ ಸಂಘದ ಕಾರ್ಯಾಧ್ಯಕ್ಷ ಮಾರುತಿ ಲಕ್ಮಾಪುರ, ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊಳಗುಂದಿ, ಕಿನ್ನಾಳಿನ  ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕ ವಾಸುದೇವ ಅಡವಿಭಾವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು,

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್