LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹೊಸ ಯರಗುಡಿ ಸರ್ಕಾರಿ ಶಾಲೆ ರಕ್ಷಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ





ಬಳ್ಳಾರಿ 29.:ತಾಲೂಕಿನ ಹೊಸ ಯರಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಕ್ಷಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ಶಾಲೆಯ ಹತ್ತಿರ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ  ನೇತೃತ್ವದಲ್ಲಿ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷರಾದ ಶಾಂತಿಯವರು   ಮಾತನಾಡಿ, ಹೊಸ ಯರಗುಡಿ  ಸರ್ಕಾರಿ ಪ್ರಾಥಮಿಕ ಶಾಲೆ ಬಡವರಿಗೆ ಇರುವುದು ಇದು ಒಂದೇ ಸರ್ಕಾರಿ ಶಾಲೆ. ಈ ಶಾಲೆಯನ್ನು ಮುಚ್ಚಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಹೋಗಬೇಕೆಂದರೆ 5 ವರ್ಷದ ಮಕ್ಕಳು ಒಂದು ಕಿಲೋ ಮೀಟರ್ ದೂರ ಹೇಗೆ ಹೋಗಬೇಕು? ಜೊತೆಗೆ ಅಲ್ಲಿನ ಜನರು ಶಾಲೆಯ ಕಟ್ಟಡ ಸರಿ ಇಲ್ಲದಿದ್ದಾಗ  ಊರಿನ ಜನರೆಲ್ಲರೂ ಸೇರಿ ಶಾಲೆಯ ರಸ್ತೆ ಸರಿ ಮಾಡಬೇಕೆಂದು ಹೋರಾಟ ಮಾಡಿದರು ಹಾಗೆಯೇ ಇಲ್ಲಿ 8ನೇ ತರಗತಿ ವರೆಗೂ ಶಾಲೆ ಸಹ ಮಾಡಬೇಕೆಂದು ಬೇಡಿಕೆ ಸಹ ಇಟ್ಟರು.ಹಾಗೆಯೇ ಇಲ್ಲಿ ವಾಸಿಸುವ ಜನರೆಲ್ಲರೂ ದುಡಿಯುವ ರೈತರು, ಕಾರ್ಮಿಕರು. ಬಡವರ ಮಕ್ಕಳು 150ಕ್ಕೂ ಹೆಚ್ಚು ಅಧಿಕ ಸಂಖ್ಯೆಯಲ್ಲಿ ದಾಖಲಾತಿ ಇರುವ ಸರ್ಕಾರಿ ಶಾಲೆ ಮುಚ್ಚಬಾರದು ಎಂಬುದು ಪೋಷಕರು ಆಗ್ರಹವಾಗಿದೆ.

ನಮ್ಮ ದೇಶದ ಮಹಾನ್ ಮಾನವತಾವಾದಿ ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಅವರು ಇಡೀ ಜೀವನವನ್ನು ಶಿಕ್ಷಣಕ್ಕಾಗಿ ದುಡಿದು,  ಶೋಷಿತರಿಗೆ, ದಲಿತರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅಕ್ಷರ ಕ್ರಾಂತಿಯ ಹರಿಕಾರರಾದರು. ಭಗತ್ ಸಿಂಗ್, ನೇತಾಜಿ ಅವರ ಕನಸು, "ಸ್ವಾತಂತ್ರ್ಯ ನಂತರ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿ" ಎಂದು ಸಾರಿದರು.

ಅಧಿಕಾರಿದ ಚುಕ್ಕಾಣಿ ಹಿಡಿದ ಎಲ್ಲಾ ಸರ್ಕಾರಗಳು ಬಡ ಮಕ್ಕಳಿಂದ ಶಿಕ್ಷಣವನ್ನು ಕಿತ್ತುಕೊಂಡು, ಸಮಾಜವನ್ನು ಇನ್ನೂಷ್ಟು ಕತ್ತಲೆ ಕೋಣೆಯಲ್ಲಿ ಹಾಕುತ್ತಿದ್ದಾರೆ.

ಆದ್ದರಿಂದ ಸಾರ್ವಜನಿಕ ಶಿಕ್ಷಣ ಉಳಿಸಿ ಜನರ ಸಮಿತಿ ನೇತೃತ್ವದಲ್ಲಿ ಸರ್ಕಾರಿ ಶಾಲೆಗಳನ್ನು ರಕ್ಷಿಸಿ, ಬಲಪಡಿಸಲು ಪ್ರಬಲ ಹೋರಾಟ ಕಟ್ಟಬೇಕು. ಹಾಗೂ ಶಿಕ್ಷಣವನ್ನು ಖಾಸಗೀಕರಣ ಮಾಡುತ್ತಿರುವ ಎಲ್ಲಾ ಸರ್ಕಾರಗಳ ವಿರುದ್ಧ ಜಾತಿ, ಧರ್ಮ ಬೇಧಬಾವವಿಲ್ಲದೆ ಎಲ್ಲಾರು ಒಂದಾಗಿ ಮತ್ತೊಂದು ನವೊದಯ ಚಳುವಳಿ ಕಟ್ಟಲು ಮುಂದಾಗಬೇಕು ಎಂದು ಕರೆ ನೀಡಿದರು.

ಈ ಪ್ರತಿಭಟನೆಯ  ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ , ಎಐಡಿಎಸ್ಓನ

ಎಐಡಿಎಸ್ಓ  ಸದಸ್ಯರಾದ ಕಾಂತೇಶ್, ತಿಪ್ಪೇಸ್ವಾಮಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು ನಾಗಮ್ಮ  ಹಾಗೂ ಊರಿನ ಸರ್ಕಾರಿ ಶಾಲೆ ಉಳಿಸುವ ಸಮಿತಿ ಅಧ್ಯಕ್ಷರು ಪಾರ್ವತಿ ಕಾರ್ಯದರ್ಶಿ ಅಂಬಣ್ಣ,  ಸದಸ್ಯರಾದ ಶೇಖರ್, ಪೋತಪ್ಪ, ಲಕ್ಷ್ಮಮ್ಮ,ಹಾಗೂ ಹಿರಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್