LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ : ಆಕಾಶ ನಂದಗಾಂವ

​ಅಥಣಿ: ವಿದ್ಯಾರ್ಥಿಗಳು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷರಾದ ಆಕಾಶ ನಂದಗಾಂವ ಅವರು ಕರೆ ನೀಡಿದರು.
ಅವರು ಸ್ಥಳೀಯ ಅಥಣಿ ವಿಮೋಚನಾ ಸಂಘದ ನಿವೇದಿತಾ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ 2026-27 ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಶಾಲಾ ಆವರಣದಲ್ಲಿ ಅತ್ಯಂತ ಸಡಗರ ಮತ್ತು ಉತ್ಸಾಹದಿಂದ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬರುವ ದಿನಮಾನದಲ್ಲಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವುದಾಗಿ ಹೇಳಿದರು.
ಚುಟುಕು ಸಾಹಿತ್ಯ ಪರಿಷತ್‌ನ ಅಥಣಿ ತಾಲೂಕು ಅಧ್ಯಕ್ಷರಾದ ಡಾ. ಆರ್.ಎಸ್. ದೊಡ್ಡನಿಂಗಪ್ಪ ಗೋಳ ಅವರು ಅತಿಥಿಯಾಗಿ ಆಗಮಿಸಿ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಅಂಕ ಹೇರುವ ಯಂತ್ರಗಳಾಗುತ್ತಿದ್ದಾರೆ. ಆದರೆ ಇಂದಿನ ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾಗಿ ಎರಡು ರೀತಿಯ ಸಧೃಡತೆ ಅವಶ್ಯಕತೆ ಇದೆ. ಅಧ್ಯಯನದ ಜೊತೆಗೆ  ವಿದ್ಯಾರ್ಥಿಗಳು ಜೀವನದಲ್ಲಿ ಕ್ರೀಡಾ ಮನೋಭಾವ, ಸಾಂಸ್ಕೃತಿಕ ಪರಂಪರೆ ರೂಢಿಸಿಕೊಂಡು ಉತ್ತಮ ನಡವಳಿಕೆಗಳನ್ನು ತಮ್ಮ ದೈನಂದಿನ ಬದುಕಿನಲ್ಲಿ ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷ ಬಡಕಂಬಿ ಅವರು ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಗಳು ಅತ್ಯಂತ ಅವಶ್ಯಕವಾಗಿದ್ದು, ಸಂಸ್ಥೆಯು ಇದಕ್ಕೆ ಸದಾ ಬೆಂಬಲ ನೀಡಲಿದೆ. ಈಗಾಗಲೇ ಶಾಲೆಯ ಆವರಣದಲ್ಲಿ ಸುಮಾರು 56 ಪ್ರಕಾರದ 276 ಗಿಡ ಮರಗಳನ್ನು ಸಂಸ್ಥೆ ಆವರಣದಲ್ಲಿ ನೆಡಲಾಗಿದೆ. ನೆಡಲಾಗಿದೆಬರುವ ದಿನಮಾನದಲ್ಲಿ ಇನ್ನು ಹೆಚ್ಚಿನ ಗಿಡ ಮರ ನೆಟ್ಟು ಹಸಿರಿನ ಜೊತೆಗೆ ಪರಿಸರದಲ್ಲಿ ಮಕ್ಕಳ ಉತ್ತಮ ಶಿಕ್ಷಣಕ್ಕೆ ಯತ್ನಿಸಲಾಗುವುದು ಎಂದು ತಿಳಿಸಿದರು.
​ಈ ಸಮಾರಂಭದಲ್ಲಿ ಪಾಲಕರ ಪ್ರತಿನಿಧಿಯಾಗಿ ಶಿವಕುಮಾರ ಬಡಕಂಬಿ ಹಾಗೂ ಶಾಲೆಯ ಪ್ರಧಾನ ಗುರುಗಳಾದ ಮಲ್ಲಿಕಾರ್ಜುನ ನಿಗಡಿ ಉಪಸ್ಥಿತರಿದ್ದು ಮಾತನಾಡಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಕಾರ್ಯಕ್ರಮದಲ್ಲಿ ವಿದ್ಯಾ ತೆವರಟ್ಟಿ, ಭಾರತಿ ಕಿಲಾರೆ, ಗೀತಾ ಕಣ್ಣೂರ, ಪೂರ್ಣಿಮಾ ಚೌಗಲಾ,ಸಮರೀನ್ ಮುಲ್ಲಾ, ಪ್ರತಿಭಾ ಸಾಗರ, ಸನ್ಮತಿ ಸೌಂದತ್ತಿ ಪಾಲ್ಗೊಂಡಿದ್ದರು.
ಕಾರ್ಯಕ್ರಮ ನಿರೂಪಣೆ ಸುಧಾರಾಣಿ ಕೋರೆ ನೆರವೇರಿಸಿದರು. ಜಯ ಕರ್ನಾಟಕ ಸಂಘಟನೆಯ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಜರುಗಿತು. ವಿವಿಧ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ಗಣ್ಯರು ವಿತರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್