LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಸುಭಾಷ ಪಾಟೀಲ ಮರು ಆಯ್ಕೆ

ಬೆಳಗಾವಿ:ಸರ್ವಾನುಮತದಿಂದ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ಸುಭಾಷ್ ಪಾಟೀಲ್ ಅವರ ಹೆಸರನ್ನು ಘೋಷಣೆ ಮಾಡಿ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾ ಚುನಾವಣಾಧಿಕಾರಿ ರಾಜಶೇಖರ್ ಶೀಲವಂತ ಅವರು ಮಾತನಾಡಿ ಭಾರತೀಯ ಜನತಾ ಪಾರ್ಟಿ ಪ್ರಜಾಪ್ರಭುತ್ವದಲ್ಲಿ ಅಪಾರ ನಂಬಿಕೆ ಮತ್ತು ವಿಶ್ವಾಸವನ್ನು ಇಟ್ಟ ಪಕ್ಷವಾಗಿದೆ ಗ್ರಾಮಾಂತರ ಜಿಲ್ಲೆಯಲ್ಲಿ

ಒಟ್ಟು 2115 ಚುನಾವಣಾ ಬೂತ್ ಗಳು , 418 ಪಕ್ಷದ ಶಕ್ತಿ ಕೇಂದ್ರಗಳು , 66 ಮಹಾಶಕ್ತಿ ಕೇಂದ್ರಗಳು ಜಿಲ್ಲೆಯಲ್ಲಿ 2115 ಬೂತ್ ಗಳಲ್ಲಿ ಬೂತ್ ಸಮಿತಿಗಳನ್ನು ರಚನೆ ಮಾಡುವ ಮೂಲಕ ರಾಜ್ಯದಲ್ಲಿಯೇ ಪ್ರತಿಶತ ನೂರರಷ್ಟು ಪಕ್ಷದ ಬೂತ್ ಸಮಿತಿ ರಚನೆ ಮಾಡಿದ ಪ್ರಪ್ರಥಮ ಜಿಲ್ಲೆಯಾಗಿದೆ.

ಕಳೆದ ಹಲವು ದಿನಗಳ ಹಿಂದೆ ಪಕ್ಷದ ಕೋರ್ ಕಮಿಟಿ ಸಭೆ ನಡೆಸಿ ಜಿಲ್ಲಾಧ್ಯಕ್ಷರ ಆಯ್ಕೆ ಬಗ್ಗೆ ಪ್ರಕ್ರಿಯೆಗಳ ಬಗ್ಗೆ ಎಲ್ಲಾ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಯಿತು ನಂತರ ಜಿಲ್ಲೆಯ ವ್ಯಾಪ್ತಿಗೆ ಬರುವ ಒಂಬತ್ತು ಸಂಘಟನಾತ್ಮಕ ಮಂಡಲಗಳ ಅಧ್ಯಕ್ಷರುಗಳ ಸರ್ವಾನು ಮತದಿಂದ ಅಧ್ಯಕ್ಷರ ಘೋಷಣೆ ಮಾಡಲಾಯಿತು. ನಂತರ ಸುಭಾಷ್ ಪಾಟೀಲ್ ಅವರನ್ನು ಸರ್ವಾನುಮತದಿಂದ ಮೂರು ವರ್ಷಗಳ ಅವಧಿಗೆ ಬೆಳಗಾವಿ ಗ್ರಾಮಾಂತರ ಜಿಲ್ಲೆಗೆ ಭಾರತೀಯ ಜನತಾ ಪಾರ್ಟಿ ಪಕ್ಷದ ಅಧ್ಯಕ್ಷರನ್ನಾಗಿ ಘೋಷಿಸುತ್ತಿದ್ದೇನೆ ಎಂದು ಹೇಳಿದರು.

ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಸುಭಾಷ್ ಪಾಟೀಲ್ ಅವರು ಮಾತನಾಡಿ ಕಳೆದ ಒಂದು ವರ್ಷಗಳ ಅವಧಿಗೆ ನಾನು ಜಿಲ್ಲಾಧ್ಯಕ್ಷನಾಗಿ ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ಶ್ರಮವಹಿಸಿದ್ದೇನೆ ಮತ್ತೆ ಈಗ ಸರ್ವಾನುಮತದಿಂದ ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳು ಮತ್ತೆ ಮೂರು ವರ್ಷಗಳ ಅವಧಿ ವರೆಗೆ ಜಿಲ್ಲೆಯ ಎಲ್ಲ ಮತಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಬೂತ್ ಮಟ್ಟದಿಂದ ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಇದಕ್ಕೆ ಎಲ್ಲಾ ಕಾರ್ಯಕರ್ತರು, ಪದಾಧಿಕಾರಿಗಳು, ಮುಖಂಡರ ಸಹಕಾರ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದೆ ಮಂಗಲಾ ಅಂಗಡಿ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ವಿಶ್ವನಾಥ್ ಪಾಟೀಲ್, ಅರವಿಂದ ಪಾಟೀಲ, ರಾಷ್ಟ್ರೀಯ ಓ.ಬಿ.ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಚುನಾವಣಾ ಸಹ ಸಂಚಾಲಕ ಈರಣ್ಣ ಚಂದರಗಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧನಶ್ರೀ ದೇಸಾಯಿ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ಸಿಧ್ಧನಗೌಡರ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ,ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ, ಸಂತೋಷ ಹಡಪದ ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್