LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ, ಸೆಪ್ಟೆಂಬರ್ 30: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.

ಈ ಹಿಂದೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು.

ಪೂರ್ವಾನುಮತಿ ಪಡೆದು ಈಗಾಗಲೇ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಿದ್ದಾರೆ. ಆದರೆ, ಇನ್ಮುಂದೆ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ.

ತಮ್ಮ ರಾಜಕೀಯದ ಪ್ರಮುಖ ನೆಲೆಯಾಗಿರುವ ಬಳ್ಳಾರಿ ಭೇಟಿಗೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದ್ದು, ಜನಾರ್ದನ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಉಂಟುಮಾಡಿತ್ತು.

ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿದ್ದ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದ ಇತರ ಅಭ್ಯರ್ಥಿಗಳು ಯಾರೂ ಗೆಲುವು ಸಾಧಿಸಿರಲಿಲ್ಲ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ