LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸೂರಜ್ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್: ಇಂದು ಸಿಐಡಿ ಕಸ್ಟಡಿ !?

ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿ ವಿಧಾನ ಪರಿಷತ್​ ಸದಸ್ಯ ಡಾ. ಸೂರಜ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ ಬೆನ್ನಲ್ಲೇ ಅವರನ್ನು ಭಾನುವಾರ ರಾತ್ರಿ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಯಿತು.


ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವಹಿಸಿದ್ದು, ಇಂದು ಬಾಡಿ ವಾರಂಟ್​​​ ಮೇಲೆ ತನಿಖಾಧಿಕಾರಿಗಳು ಸೂರಜ್ ಅವರನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಭಾನುವಾರ ಜೈಲಿಗೆ ತಲುಪುವುದು ತಡವಾದ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣಗೆ ಸೋಮವಾರ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ನೀಡಲಿದ್ದಾರೆ. ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಸೂರಜ್ ಅವರನ್ನು ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.


ಯುವಕನಿಗೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377 (ಅಸಹಜ ಲೈಂಗಿಕ ದೌರ್ಜನ್ಯ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿತ್ತು. ಅಸಹಜ ಲೈಂಗಿಕ ದೌರ್ಜನ್ಯ ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದರು. ತನ್ನ ಮೇಲೆ ಹೊಳೆನರಸೀಪುರದ ಗನ್ನಿಕಂಡದ ಫಾರ್ಮ್‌ಹೌಸ್‌ನಲ್ಲಿ ಜೂನ್ 16ರ ಸಂಜೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್