LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭಾರತೀಯ ಲಲಿತ ಕಲೆಗಳ ಉಳಿವು ನಮ್ಮೆಲ್ಲರ ಜವಾಬ್ದಾರಿ: ಡಾ. ಅಪ್ಪಕಾಯ ಮಹೇಶ ಶರ್ಮ

 


ಬಳ್ಳಾರಿ, ಏ.೨೨..: ಭಾರತೀಯ ಲಲಿತ ಕಲೆಗಳನ್ನು ಉಳಿಸಿ ಬೆಳೆಸುವ ಕಾರ್ಯವು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಂಡೂರು ಸರಕಾರಿ ಪದವಿ ಕಾಲೇಜಿನ ಅಧ್ಯಾಪಕ ಡಾ. ಅಪ್ಪಕಾಯ ಮಹೇಶ ಶರ್ಮ ಅಭಿಪ್ರಾಯಪಟ್ಟರು.
ನಗರದ ರಾಘವೇಂದ್ರ ಮಠದ ಸಭಾಮಂಟಪದಲ್ಲಿ ತುಂಗಾ ಗಂಗಾ ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾದ ‘ವೈಶಾಖ ಮಾಸ ಸಾಂಸ್ಕೃತಿಕ ಸಂಭ್ರಮ?೨೦೨೬’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಸಮಾನ ಪ್ರೋತ್ಸಾಹ ನೀಡಬೇಕೆಂದರು.
ಬಿಪಿಎಸ್ಸಿ ಶಾಲೆಯ ಪ್ರಾಂಶುಪಾಲ ಅನಿಲ್ ಕುಮಾರ್ ಮಾತನಾಡಿ, ತುಂಗಾ ಗಂಗಾ ಸಾಂಸ್ಕೃತಿಕ ಕಲಾ ಟ್ರಸ್ಟ್ ಇಂತಹ ಅಪರೂಪದ ಕಲಾ ಪ್ರದರ್ಶನಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಟ್ರಸ್ಟ್ ವತಿಯಿಂದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ವೈದ್ಯರಾದ ಶ್ರೀಧರಮೂರ್ತಿ, ಎಸ್.ಕೆ. ಅಜಯ್, ಬಿ.ಕೆ. ಶ್ರೀಕಾಂತ್, ಎಸ್.ಕೆ. ಪ್ರಣೀತ ಅಜಯ್ ಅವರಿಗೆ ‘ತುಂಗಾ ವೈದ್ಯ ರತ್ನ’, ಡಾ. ಶ್ರೀನಾಥ್ ಹಾಗೂ ಹನುಮಂತ ಆಚಾರ್ ಅವರಿಗೆ ‘ತುಂಗಾ ಸಮಾಜ ಸೇವಾ ರತ್ನ’, ಡಾ. ಮಹೇಶ ಶರ್ಮ ಹಾಗೂ ಅನಿಲ್ ಕುಮಾರ್ ಅವರಿಗೆ ‘ತುಂಗಾ ಶಿಕ್ಷಣ ರತ್ನ’, ಪ್ರಸನ್ನ ಆಚಾರ್ ಅವರಿಗೆ ‘ತುಂಗಾ ಕಲಾ ಪೋಷಕ ರತ್ನ’, ಶ್ರೀಜಾ ಅವರಿಗೆ ‘ತುಂಗಾ ರಂಗ ಕಲಾ ರತ್ನ’ ಪ್ರಶಸ್ತಿ ಪ್ರದಾನಿಸಲಾಯಿತು.
ನಂತರ ಶ್ರೀಜಾ ತಂಡದಿಂದ ‘ಶ್ರೀನಿವಾಸ ಕಲ್ಯಾಣ’ ಭಕ್ತಿಪ್ರಧಾನ ನಾಟಕ ಪ್ರದರ್ಶನಗೊಂಡು ಭಕ್ತರ ಮನಸೆಳೆಯಿತು.
ಕಾರ್ಯಕ್ರಮದಲ್ಲಿ ಕಿಸ್ಕಿಂದ ವಿಶ್ವವಿದ್ಯಾಲಯದ ಕುಲಸಚಿವ ಡಾ. ರಾಜು ಜಡರ್, ಕಣೆಕಲ್ ಶ್ರೀಧರ್, ವಿಠ್ಠಲ ದೇಸಾಯಿ, ವಿಜಯ ವಿಠ್ಠಲ, ರಾಮರಾವ್ ಕುಲಕರ್ಣಿ, ಸಿಮೆಂಟ್ ಗಿರಿ, ಅಶೋಕ್ ಕುಲಕರ್ಣಿ, ವೀರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಟಿ. ನಾಗಭೂಷಣ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ವಿ. ರಾಮಚಂದ್ರ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್