LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ

ಬೆಂಗಳೂರು, ಆಗಸ್ಟ್​​ 31: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದನು. ಈ ಮಾಹಿತಿಯನ್ನು ಇಮಿಗ್ರೇಷನ್ ಅಧಿಕಾರಿಗಳು ಎನ್​ಐಎಗೆ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST