LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ

ಕೋಲ್ಕತ್ತಾ,  

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿ ಮೊದಲ ಬಾರಿಗೆ ಬಂಗಾಳದ ಗದ್ದುಗೆ ಏರುತ್ತಿದೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ ಇಂದು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನಂದಿಗ್ರಾಮದ ಹೋರಾಟದಿಂದ ಹಿಡಿದು ವಿಧಾನಸಭೆಯ ಅಂಗಳದವರೆಗೆ ಸುವೇಂದು ಅಧಿಕಾರಿ ನಡೆದು ಬಂದ ಹಾದಿ ಅತ್ಯಂತ ರೋಚಕವಾಗಿದೆ.

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ 

ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಮಿತ್ ಶಾ ಅವರು ಅಧಿಕಾರಿ ಅವರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸುವೇಂದು ಅವರು ಸಂಘರ್ಷದ ಹಾದಿಯಲ್ಲಿ ಬಂದವರು. ಅವರಿಗೆ ಆಡಳಿತದ ಅನುಭವವಿದೆ. ಬಂಗಾಳದ ಜನತೆಯ ಆಸೆಗಳನ್ನು ಪೂರ್ಣಗೊಳಿಸಲು ಅವರು ಸಮರ್ಥರಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಠಾಗೋರ್ ಜಯಂತಿಯಂದೇ ಪ್ರಮಾಣ ವಚನ

ನಿಯೋಜಿತ ಸಿಎಂ ಸುವೇಂದು ಅಧಿಕಾರಿ ಅವರು ಈಗಾಗಲೇ ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇಂದು (ಮೇ 9) ವಿಶ್ವಕವಿ ರವೀಂದ್ರನಾಥ ಠಾಗೋರ್ ಅವರ 165ನೇ ಜನ್ಮದಿನವಾಗಿದ್ದು, ಬಂಗಾಳಿಗರ ಭಾವನೆಗಳಿಗೆ ಗೌರವ ನೀಡುವ ದೃಷ್ಟಿಯಿಂದ ಇದೇ ದಿನವನ್ನು ಅಧಿಕಾರ ಸ್ವೀಕಾರಕ್ಕೆ ನಿಗದಿಪಡಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಸುವೇಂದು ಅಧಿಕಾರಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

1995ರಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದ ಸುವೇಂದು, ನಂತರ ತೃಣಮೂಲ ಕಾಂಗ್ರೆಸ್ ಸೇರಿದ್ದರು. ನಂದಿಗ್ರಾಮ ಮತ್ತು ಸಿಂಗೂರಿನ ಭೂಸ್ವಾಧೀನ ವಿರೋಧಿ ಚಳವಳಿಗಳ ಮೂಲಕ ಜನನಾಯಕನಾಗಿ ಬೆಳೆದರು. 2009 ಮತ್ತು 2014ರಲ್ಲಿ ಸಂಸದರಾಗಿದ್ದ ಅವರು, ಈ ಹಿಂದೆ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ದರು.

ಆದರೆ, ಮಮತಾ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಉಂಟಾದ ಭಿನ್ನಮತದಿಂದಾಗಿ 2020ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. 2021ರ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು 1,956 ಮತಗಳಿಂದ ಸೋಲಿಸುವ ಮೂಲಕ ಇತಿಹಾಸ ಬರೆದಿದ್ದ ಅವರು, ರಾಜ್ಯದ ಪ್ರಬಲ ವಿರೋಧ ಪಕ್ಷದ ನಾಯಕರಾಗಿ ಗುರುತಿಸಿಕೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್