LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಧಾರವಾಡ ರಂಗಾಯಣದಿಂದ ಜುಲೈ 5 ರಂದು ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ: 

ಧಾರವಾಡ ,03 :  ಧಾರವಾಡ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಬೊಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿ ಆಧಾರಿತ, ನಟರಾಜ್ ಹೊನ್ನವಳ್ಳಿ ನಿರ್ದೇಶನದ, ಶಿವಮೊಗ್ಗ ರಂಗಾಯಣದ ಪ್ರಸ್ತುತಿಯ ‘ಸ್ವಾತಂತ್ರ್ಯದ ಓಟ’ ನಾಟಕವನ್ನು ಜುಲೈ 5 ರಂದು ಭಾನುವಾರ ಸಂಜೆ 5:30 ಗಂಟೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಪ್ರದರ್ಶಿಸಲಾಗುವುದು ಎಂದು ರಂಗಾಯಣ ನಿರ್ದೇಶಕ ಝಕೀರ ನದಾಫ ಅವರು ಹೇಳಿದರು.
ಅವರು ಇಂದು (ಜು.02) ಬೆಳಿಗ್ಗೆ ರಂಗಾಯಣ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು. 
ದೇಶ ವಿಭಜನೆಯ ಸಂದರ್ಭದಲ್ಲಿ ಎಲ್ಲವನ್ನೂ ಕಳೆದುಕೊಂಡ ಜನರ ಬದುಕು, ಅನುಮಾನ ಮತ್ತು ಅಸಹನೆಯ ನಡುವೆಯೂ ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡ ಚಾಂದ್ ಅಲಿ ಎಂಬ ಯುವಕನ ಜೀವನಗಾಥೆಯನ್ನು ನಾಟಕ ಕಟ್ಟಿಕೊಡುತ್ತದೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದು ತನ್ನ ಗುರುತನ್ನು ಮುಚ್ಚಿಟ್ಟುಕೊಂಡು ಬದುಕಬೇಕಾದ ಅನಿವಾರ್ಯತೆ. ಮುತ್ತುಪ್ಪಾಡಿಯಲ್ಲಿ ಮಾನವೀಯ ಸಂಬಂಧಗಳ ಆಶ್ರಯ ಪಡೆದ ಅವನ ಬದುಕಿನ ಅತಂತ್ರತೆಯನ್ನು ನಾಟಕ ಪರಿಣಾಮಕಾರಿಯಾಗಿ ಚಿತ್ರಿಸುತ್ತದೆ ಎಂದು ತಿಳಿಸಿದರು.
ಸ್ವಾತಂತ್ರ್ಯದ ನಿಜವಾದ ಅರ್ಥವನ್ನು ಮಾನವೀಯ ಸಂಬಂಧಗಳ ಮೂಲಕ ಅನಾವರಣಗೊಳಿಸುವ ಈ ನಾಟಕವು ಜಾತಿ, ಧರ್ಮಗಳನ್ನು ಮೀರಿ ಮನುಷ್ಯತ್ವವೇ ಶ್ರೇಷ್ಠ ಎಂಬ ಸಂದೇಶ ಸಾರುತ್ತದೆ. ವಾಘಾ ಗಡಿಯಿಂದ ಆರಂಭವಾಗಿ ಕರಾಚಿ, ಲಾಹೋರ್, ದೆಹಲಿ, ಮುತ್ತುಪ್ಪಾಡಿ, ಕ್ಯಾಲಿಫೆÇೀರ್ನಿಯಾ ಹಾಗೂ ಬರ್ಲಿನ್‍ವರೆಗೆ ಸಾಗುವ ಕಥಾನಕವು ದೇಶ ವಿಭಜನೆಯಿಂದ ಸುವರ್ಣ ಸ್ವಾತಂತ್ರ್ಯೋತ್ಸವದವರೆಗಿನ ಭಾರತದ ಸಾಮಾಜಿಕ, ಧಾರ್ಮಿಕ ಹಾಗೂ ಆರ್ಥಿಕ ಬದುಕಿನ ಅನುಭವಗಳನ್ನು ಪ್ರೇಕ್ಷಕರ ಮುಂದೆ ತೆರೆದಿಡುತ್ತದೆ ಎಂದು ಹೇಳಿದರು.
ಸಮಾಜದಲ್ಲಿರುವ ಅಪನಂಬಿಕೆ ಹಾಗೂ ಸಂಘರ್ಷಗಳನ್ನು ಕಡಿಮೆ ಮಾಡಿ ಸಾಮರಸ್ಯದ ಸಂದೇಶ ಸಾರುವ ಪ್ರಯತ್ನವೇ ‘ಸ್ವಾತಂತ್ರ್ಯದ ಓಟ’ ನಾಟಕದ ಪ್ರಮುಖ ವೈಶಿಷ್ಟ್ಯವಾಗಿದೆ. ನಾಟಕ ವೀಕ್ಷಣೆಗೆ ರೂ.100 ಪ್ರವೇಶ ದರವನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ವೀ. ಹುಡೇದ ಅವರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ