LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ ಜೂನ್ 2ರಂದು

ಬಳ್ಳಾರಿ: ತುಂಗಭದ್ರ ಜಲಾಶಯದಲ್ಲಿ ವರ್ಷದಿಂದ ವರ್ಷಕ್ಕೆ ಹೂಳು ಸಂಗ್ರಹವಾಗುತ್ತಿರುವುದರಿಂದ ನೀರು ಸಂಗ್ರಹ ಸಾಮರ್ಥ್ಯ ಕುಸಿಯುತ್ತಿದೆ. ಜಲಾಶಯದ ಹೂಳು ತೆರವುಗೊಳಿಸುವ ಕುರಿತು ಸರ್ಕಾರಗಳ ಗಮನ ಸೆಳೆಯುವ ಉದ್ದೇಶದಿಂದ ತುಂಗಭದ್ರ ರೈತ ಸಂಘವು ಜೂನ್ 2ರಂದು ಸಾಂಕೇತಿಕ ಹೂಳು ತೆರವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಲಾಶಯದ ಹೂಳು ತೆರವುಗೊಳಿಸುವಂತೆ ಹಲವು ವರ್ಷಗಳಿಂದ ಸರ್ಕಾರಗಳನ್ನು ಒತ್ತಾಯಿಸಲಾಗುತ್ತಿದೆ. 2017ರಲ್ಲಿ ರೈತ ಸಂಘದ ನೇತೃತ್ವದಲ್ಲಿ 31 ದಿನಗಳ ಕಾಲ ಹೂಳು ತೆರವು ಜಾತ್ರೆ ನಡೆಸಲಾಗಿತ್ತು. ದಾನಿಗಳ ಸಹಕಾರದಿಂದ ಸುಮಾರು ₹31 ಲಕ್ಷ ವೆಚ್ಚ ಮಾಡಿ ಕಾರ್ಯ ಕೈಗೊಳ್ಳಲಾಗಿತ್ತು. ಆದರೂ ಸರ್ಕಾರದ ಮಟ್ಟದಲ್ಲಿ ಸಮಗ್ರ ಹೂಳು ತೆರವಿಗೆ ಅಗತ್ಯ ಕ್ರಮಗಳು ಕೈಗೊಳ್ಳಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸರ್ಕಾರವನ್ನು ಎಚ್ಚರಿಸುವ ಉದ್ದೇಶದಿಂದ 105 ಟ್ರ್ಯಾಕ್ಟರ್‌ಗಳ ಮೂಲಕ ಸಾಂಕೇತಿಕ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಜೂನ್ 1ರಂದು ದರೂರು ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಟ್ರ್ಯಾಕ್ಟರ್‌ಗಳ ಮೆರವಣಿಗೆ ತುಂಗಭದ್ರ ಜಲಾಶಯದತ್ತ ತೆರಳಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿ ಟ್ರ್ಯಾಕ್ಟರ್‌ಗೆ ₹3 ಸಾವಿರ ಡೀಸೆಲ್ ವೆಚ್ಚವನ್ನು ಸಂಘವೇ ಭರಿಸಲಿದೆ ಎಂದರು.
ಜೂನ್ 2ರಂದು ಜಲಾಶಯದ ಹಿಂಭಾಗದಲ್ಲಿರುವ ಗೂಂಡಾ ಫಾರೆಸ್ಟ್ ಗೆಸ್ಟ್ ಹೌಸ್ ಸಮೀಪ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಹೂಳು ತೆರವು ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಬಳಿಕ ಎರಡು ಜೆಸಿಬಿಗಳ ನೆರವಿನಿಂದ ಜಲಾಶಯದ ಹೂಳನ್ನು ಟ್ರ್ಯಾಕ್ಟರ್‌ಗಳಲ್ಲಿ ತುಂಬಿ ಸಾಂಕೇತಿಕವಾಗಿ ಹೊರತೆಗೆಯುವ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.
“ಈ ಕಾರ್ಯಕ್ರಮದ ಮೂಲಕ ಸರ್ಕಾರಗಳು ಎಚ್ಚೆತ್ತುಕೊಂಡು ತುಂಗಭದ್ರ ಜಲಾಶಯದ ಸಮಗ್ರ ಹೂಳು ತೆರವಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು. ಜಲಾಶಯದ ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು ರೈತರ ಹಿತದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ” ಎಂದು ಅವರು ಒತ್ತಾಯಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್