LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್‌ಐಆರ್ ಕುರಿತು ಜಾಗೃತಿ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಅಲ್ಲಂ ಪ್ರಶಾಂತ್

ಬಳ್ಳಾರಿ, ಜು. 10: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ಜಿಲ್ಲಾಡಳಿತ ಭವನದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್ ಭಾಗವಹಿಸಿ, ಮತದಾರರಿಗೆ ಅನುಕೂಲವಾಗುವಂತೆ ಹಲವು ಸಲಹೆಗಳನ್ನು ಅಧಿಕಾರಿಗಳ ಮುಂದಿಟ್ಟರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಮತದಾರರಿಗೆ ನೆರವಾಗಲು ಸಹಾಯ ಕೇಂದ್ರಗಳು, ಬಿ.ಎಲ್.ಒ. ಕೇಂದ್ರಗಳು ಹಾಗೂ ವೋಟರ್ ಸಹಾಯ ಕೇಂದ್ರಗಳನ್ನು ಸ್ಥಾಪಿಸಿ, ಅವುಗಳ ವಿವರಗಳನ್ನು ಸಾರ್ವಜನಿಕರಿಗೆ ಪ್ರಕಟಿಸಬೇಕು ಎಂದು ಅವರು ಮನವಿ ಮಾಡಿದರು.
ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಆಟೋಗಳ ಮೂಲಕ ಜಾಗೃತಿ ಅಭಿಯಾನ ನಡೆಸಬೇಕು. ಅಲ್ಲದೆ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡುವ ವಿಧಾನ ಕುರಿತು ಕಾಲೇಜುಗಳಲ್ಲಿ ವಿಶೇಷ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಯುವ ಮತದಾರರಿಗೆ ತರಬೇತಿ ನೀಡಬೇಕು ಎಂದು ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೈರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್