LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮುಂಗಾರು ಹಂಗಾಮಿನ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ


ಕೊಪ್ಪಳ ಜುಲೈ 03: ಜಿಲ್ಲೆಯಲ್ಲಿ ಪ್ರಸ್ತುತ ಭಿತ್ತನೆಯಾಗಿರುವ ಬೆಳೆಗಳಿಗೆ ಅವಶ್ಯವಿರುವ ರಸಗೊಬ್ಬರ ಮತ್ತು ಮುಂದೆ ಬಿತ್ತನೆಗೆ ಅಗತ್ಯವಿರುವ ಬೀಜ, ಗೊಬ್ಬರವನ್ನು ಸಮರ್ಪಕವಾಗಿ ಪೂರೈಸಿ ಮುಂಗಾರು ಹಂಗಾಮಿನ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಕೃಷಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
 ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ (ಜುಲೈ 01) ಹಮ್ಮಿಕೊಂಡಿದ್ದ ಮುಂಗಾರು ಹಂಗಾಮಿನ ನಿರ್ವಹಣೆಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ಜಿಲ್ಲೆಯಲ್ಲಿ ಒಟ್ಟಾರೆ 219 ಬಿತ್ತನೆ ಬೀಜ ಹಾಗೂ 99 ರಸಗೊಬ್ಬರ ಮಾದರಿಗಳನ್ನು ಗುಣಮಟ್ಟ ಪರಿಕ್ಷೇಗೆ ಒಳಪಡಿಸಲಾಗಿದ್ದು, ಅದರಲ್ಲಿ 8 ಬಿತ್ತನೆ ಬೀಜ ಮಾದರಿಗಳು ಕಳಪೆಯಾಗಿರುವ ಬಗ್ಗೆ ಕಂಡುಬಂದಿದ್ದು, ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಬೀಜ ಅಧಿನಿಯಮದನ್ವಯ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಗೆ ಪೂರೈಕೆಯಾಗುವ ರಸಗೊಬ್ಬರವನ್ನು ರೈತರಿಗೆ ಸಮರ್ಪಕವಾಗಿ ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂಗಾರು ಮತ್ತು ಹಿಂಗಾರು ಹಂಗಾಮಿನ ಕಳಪೆ ಹಾಗೂ ನಕಲಿ ಬಿತ್ತನೆ ಬೀಜ ಮತ್ತು ಕೀಟನಾಶಕಗಳ ಮಾರಾಟವನ್ನು ತಡೆಗಟ್ಟಲು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದ್ದು, ಜಿಲ್ಲೆಯಾದ್ಯಂತ ಇರುವ ಬಿತ್ತನೆ ಬೀಜ ಕಾರ್ಯಪಡೆಯು ನಿರಂತರವಾಗಿ ಆಕಸ್ಮಿಕ ದಾಳಿಗಳನ್ನು ನಡೆಸಿ. ದಾಸ್ತಾನು ಮತ್ತು ಗುಣಮಟ್ಟವನ್ನು ಪರಿಶೀಲಿಸಬೇಕು ಎಂದರು.
 ಜಿಲ್ಲೆಯಲ್ಲಿ ನಕಲಿ ಅಥವಾ ಕಳಪೆ ಕೃಷಿ ಪರಿಕರಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ, ಅಂತಹ ಮಾರಾಟಗಾರರ ಪರವಾನಗಿಯನ್ನು ತಕ್ಷಣವೇ ಅಮಾನತುಗೊಳಿಸಬೇಕು. ಅಲ್ಲದೆ, ಬೀಜ ಕಾಯ್ದೆ 1966, ಬೀಜ ನಿಯಮಗಳು 1968 ಮತ್ತು ಕೀಟನಾಶಕಗಳ ಕಾಯ್ದೆ 1968 ಮತ್ತು ಕೀಟನಾಶಕ ನಿಯಮ 1971 ಮತ್ತು ತದನಂತರ ರೂಪಿಸಲಾಗಿರುವ ನಿಯಮಾವಳಿಗಳನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಬೇಕು. ರೈತರು ಕೃಷಿ ಪರಿಕರಗಳನ್ನು ಖರೀದಿಸುವಾಗ ಕಡ್ಡಾಯವಾಗಿ ಅಧಿಕೃತ ರಸೀದಿಯನ್ನು ಪಡೆಯುವಂತೆ ಮತ್ತು ಲೇಬಲ್ ಆಧಾರಿತ ಮಾಹಿತಿಯನ್ನು ಗಮನಿಸುವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಮುಖಾಂತರ ರೈತರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.
 ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಒತ್ತು ಕೊಡಬೇಕು. ಬೆಳೆ ನಷ್ಟ ಅನುಭವಿಸಿದಲ್ಲಿ ಬೆಳೆವಿಮೆ ಸೌಲಭ್ಯ ಪಡೆಯಲು ರೈತರಿಗೆ ಸಲಹೆ ಮಾಡಬೇಕು. ಬೆಳೆವಿಮೆ ಸೇರಿದಂತೆ ಇನ್ನೀತರ ಕೃಷಿ ಸಂಬಂಧಿ ಸೌಕರ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಫ್‌ಐಡಿ ಹೊಂದುವ ಬಗ್ಗೆ ಸಹ ರೈತ ವರ್ಗಕ್ಕೆ ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
 ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತ ಕುಮಾರ್, ಜಂಟಿ ಕೃಷಿ ನಿರ್ದೇಶಕರಾದ ಜಿ.ಡಿ.ಕೃಷ್ಣಮೂರ್ತಿ, ತೋಟಗಾರಿಕೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ, ಉಪ ಕೃಷಿ ನಿರ್ದೇಶಕರಾದ ಎಲ್.ಸಿದ್ದೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಅಧಿಕಾರಿಗಳು, ಗೊಬ್ಬರ ಮಾರಾಟ ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ