LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಿಯಲ್ಲಿ ಪಾಕಿಸ್ತಾನ ಪರ ಘೋಷಣೆ, ಛತ್ತೀಸ್​ಗಢದ ಟೆಕ್ಕಿ ಬಂಧನ

ಬೆಂಗಳೂರು, ಮೇ 14: ಬೆಂಗಳೂರಿನ  ವೈಟ್‌ಫೀಲ್ಡ್ ಪ್ರದೇಶದ ಪ್ರಶಾಂತ್ ಲೇಔಟ್‌ನ ಪಿಜಿಯಲ್ಲಿ ಪಾಕಿಸ್ತಾನ ಪರ ಘೋಷಣೆ (Pro Pakistan Slogans) ಕೂಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಛತ್ತೀಸ್‌ಗಢ ಮೂಲದ 26 ವರ್ಷದ ಶುಭಾಂಶು ಶುಕ್ಲಾ ಎಂದು ಗುರುತಿಸಲಾಗಿದೆ. ಆತ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾನೆ. ಆರೋಪಿಯು ಮೇ 9ರ ಮಧ್ಯರಾತ್ರಿ 12.30 ರ ಸಮಯದಲ್ಲಿ, ಪಿಜಿಯಲ್ಲಿದ್ದ ಇತರ ಯುವಕರು ‘ಆಪರೇಷನ್ ಸಿಂಧೂರ್’ ಯಶಸ್ಸನ್ನು ಸಂಭ್ರಮಿಸುತ್ತಿದ್ದ ವೇಳೆ ಬಾಲ್ಕನಿಯಲ್ಲಿ ನಿಂತು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾನೆ ಎಂದು ತಿಳಿದುಬಂದಿದೆ.

ಪಾಕಿಸ್ತಾನ ಪರ ಘೋಷಣೆ ಕೇಳುತ್ತಿದ್ದಂತೆಯೇ, ಉಗ್ರರು ಇಲ್ಲಿಗೂ ಬಂದೇ ಬಿಟ್ಟರು ಎಂದು ಇತರ ಯುವಕರು ಭೀತಿಗೊಳಗಾಗಿದ್ದಾರೆ. ಪಿಜಿಯಲ್ಲಿದ್ದ ಇನ್ನಿತರ ಯುವಕರು ಭಯಗೊಂಡು ಹೊರಗೆ ಬಂದಾಗ, ಎರಡು ಮಂದಿ ಬಾಲ್ಕನಿಯಲ್ಲಿ ನಿಂತಿರುವುದು ಕಾಣಿಸಿದೆ. ಆ ಇಬ್ಬರಲ್ಲಿ ಒಬ್ಬನಾದ ಶುಭಾಂಶು ಪಾಕ್ ಪರ ಘೋಷಣೆ ಕೂಗುತ್ತಿದ್ದುದು ಕಾಣಿಸಿದೆ. ಎದುರಿನ ಪಿಜಿಯಲ್ಲಿದ್ದ ಯುವಕ ಈ ದೃಶ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದ. ನಂತರ ಅಲ್ಲಿದ್ದ ಯುವಕರು ತುರ್ತು ಸಹಾಯವಾಣಿ ಸಂರ್ಖಯೆ 112 ಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ