LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗ್ರಾಹಕರ ವ್ಯಾಜ್ಯಗಳ ಇತ್ಯರ್ಥದಲ್ಲಿ ಕರ್ನಾಟಕ 2ನೇ ಸ್ಥಾನ: ಟಿ.ಜಿ.ಶಿವಶಂಕರೇಗೌಡ

ರಾಜ್ಯದಲ್ಲಿಯೇ ಮೊದಲ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರ ಉದ್ಘಾಟನೆ

ಬಳ್ಳಾರಿ: 02 - ರಾಜ್ಯದಲ್ಲಿ ಗ್ರಾಹಕರ ಹಕ್ಕುಗಳಿಗೆ ಚ್ಯುತಿಯಾದ ಪ್ರಕರಣಗಳ ಇತ್ಯರ್ಥದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರು ಹೇಳಿದರು.

ಶನಿವಾರದಂದು ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ರೈಲ್ವೇ ನಿಲ್ದಾಣ ಎದುರುಗಡೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಬಳ್ಳಾರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಹಕರ ಕುಂದುಕೊರತೆಗಳನ್ನು ನಿಗದಿತ ಅವಧಿಯೊಳಗೆ ಮತ್ತು ಸಾರಾಂಶ ಕಾರ್ಯವಿಧಾನವನ್ನು ಅನುಸರಿಸುವ ಮೂಲಕ ಉಚಿತವಾಗಿ ಪರಿಹಾರ ಒದಗಿಸುವುದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳ ಮುಖ್ಯ ಉದ್ದೇಶ ಮತ್ತು ಕರ್ತವ್ಯವಾಗಿದೆ ಎಂದು ತಿಳಿಸಿದರು.

ಭಾರತ ದೇಶವು ಜಾಗತೀಕರಣ ಹೊಂದುತ್ತಿದೆ. ಅಭಿವೃದ್ಧಿಯತ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಗ್ರಾಹಕರ ಹಕ್ಕುಗಳಿಗೆ ಚ್ಯುತಿಯಾಗದಂತೆ ಅವರ ಹಿತಾಸಕ್ತಿ ಕಾಪಾಡಲು ದೇಶದಲ್ಲಿ ರಾಷ್ಟಿçÃಯ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ಜಾರಿಗೆ ತರಲಾಯಿತು. ಸಾರ್ವಜನಿಕರು ಗ್ರಾಹಕ ಕಾಯ್ದೆ, ಹಕ್ಕುಗಳ ಕುರಿತು ಜಾಗೃತಿ ಹೊಂದಬೇಕು ಎಂದರು.
ರಾಜ್ಯದಲ್ಲಿ 34 ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಿದ್ದು, ಗ್ರಾಹಕರ ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕಾಗಿ ಹಂತ-ಹAತವಾಗಿ ಎಲ್ಲಾ ಜಿಲ್ಲೆಗಳಲ್ಲೂ ಮಧ್ಯಸ್ಥಿಕೆ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಸಮಾಜದಲ್ಲಿ ಡಿಜಿಟಲ್ ಖರೀದಿ ಹೆಚ್ಚಾಗಿದ್ದು, ಆನ್‌ಲೈನ್ ಮೂಲಕ ಅತಿ ಹೆಚ್ಚು ವಂಚನೆಗಳು ಆಗುತ್ತಿವೆ. ಈ ಕುರಿತು ಎಚ್ಚರಿಕೆಯಿಂದ ವ್ಯವಹರಿಸಬೇಕು. ಪ್ರಸ್ತುತದಲ್ಲಿ ಗ್ರಾಹಕರಿಗಿರುವ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದು ಹೇಳಿದ ಅಧ್ಯಕ್ಷರು, ಗ್ರಾಹಕರ ಹಕ್ಕುಗಳ ರಕ್ಷಣೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರಲು ನಾವೆಲ್ಲರೂ ಪ್ರಯತ್ನಿಸೋಣ ಎಂದು ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರ ಆರಂಭಗೊAಡಿರುವುದು ಸಂತಸದ ವಿಷಯವಾಗಿದ್ದು, ನಮ್ಮ ಕಲ್ಯಾಣ ಕರ್ನಾಟಕ ಭಾಗವು ಇನ್ನಷ್ಟು ಅಭಿವೃದ್ಧಿಯಾಗಲಿ ಎಂದು ಆಶಿಸಿದರು.
ಜಿಲ್ಲಾ ನ್ಯಾಯಾಲಯದಲ್ಲಿ ನುರಿತ ಮಧ್ಯಸ್ಥಿಕೆದಾರರು ಇದ್ದು, ಮಧ್ಯಸ್ಥಿಕೆ ಕೇಂದ್ರಕ್ಕೆ ಬೇಕಾದ ಅಗತ್ಯ ಸಹಕಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಒದಗಿಸಲಾಗುವುದು ಎಂದು ಹೇಳಿದರು.

‘ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು’ ಎನ್ನುವಂತೆ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವುದು. ಕಕ್ಷಿದಾರರಿಗೆ ಸಕಾಲದಲ್ಲಿ ನ್ಯಾಯ ದೊರಕಿಸಿಕೊಡುವುದು ಆದ್ಯತೆಯಾಗುವುದರಿಂದ ನೂತನ ಕೇಂದ್ರಗಳಿಗೆ ಮನ್ನಣೆ ಬರಲಿದೆ ಎಂದರು.ವ್ಯಾಜ್ಯಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸುವುದರ ಮೂಲಕ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೇಶಕ್ಕೆ ಮಾದರಿಯಾಗಬೇಕು. ಅಂತರಾಷ್ಟಿçÃಯ ಮಟ್ಟದಲ್ಲಿ ಬೆಳೆಯಬೇಕು ಎಂದು ಶುಭ ಹಾರೈಸಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಧ್ಯಸ್ಥಿಕೆಯ ಮೂಲಕ ಗ್ರಾಹಕರ ವ್ಯಾಜ್ಯಗಳ ಇತ್ಯರ್ಥ ಪಡಿಸುವಲ್ಲಿ ಬಳ್ಳಾರಿ ಜಿಲ್ಲೆಯು ಎರಡನೆ ಸ್ಥಾನದಲ್ಲಿದೆ. ಇದಕ್ಕೆ ವಕೀಲರ ಸಹಕಾರವು ಒಳಗೊಂಡಿದೆ ಎಂದು ತಿಳಿಸಿದ ಅವರು, ಮಧ್ಯಸ್ಥಿಕೆ ಕೇಂದ್ರ ಆರಂಭಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದವರೆಲ್ಲರಿಗೂ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಶಿರಸ್ತೇದಾರ ತೋಟದ ರವಿಕುಮಾರ ಅವರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನಡೆದುಬಂದ ಹಾದಿಯ ಬಗ್ಗೆ ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ರಾಜಿಯಾದಂತಹ ಕಕ್ಷಿದಾರರಿಗೆ ಪರಿಹಾರವಾಗಿ ಚೆಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟಾçರ್ ಮತ್ತು ಆಡಳಿತಾಧಿಕಾರಿ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾದ ಕೆ.ಕೋಟೇಶ್ವರ ರಾವ್, ಜೆ.ಎಂ. ಅನಿಲ್ ಕುಮಾರ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ ಸೇರಿದಂತೆ ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರು, ವಕೀಲರು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧಿಕಾರಿ-ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್