LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಮ್ಯೂನಿಸ್ಟ್ ಮೈಂಡ್​ಸೆಟ್​ನ ಸ್ವಾಮೀಜಿಗಳಿಂದ ಹಿಂದೂ ಧರ್ಮ ಛಿದ್ರಗೊಳಿಸುವ ಸಂಚು: ಶಾಸಕ ಯತ್ನಾಳ್‌

ಹುಬ್ಬಳ್ಳಿ, ಸೆಪ್ಟೆಂಬರ್ 19: ಕೆಲವು ಮಂದಿ ಕಮ್ಯೂನಿಸ್ಟ್ ಮೈಂಡ್​ಸೆಟ್​ನ ಸ್ವಾಮೀಜಿಗಳು ಹಿಂದೂ ಧರ್ಮದಿಂದ ಲಿಂಗಾಯತರ ದೂರ ಮಾಡಲು ಸಂಚು ಹೂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು. ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವಿನ ಸಾಮ್ಯತೆಗಳನ್ನು ಒತ್ತಿ ಹೇಳಿದರು. ದುರದೃಷ್ಟವಶಾತ್, ಕೆಲವು ಸ್ವಾಮೀಜಿಗಳು ತಮ್ಮ ಸ್ವಾರ್ಥಕ್ಕಾಗಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವೆ ಕಂದಕವನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು. ಈ ಸ್ವಾಮೀಜಿಗಳು ಲಿಂಗಾಯತ ಧರ್ಮ ಅಥವಾ ಶೈವರ ಉದ್ಧಾರದಲ್ಲಿ ಆಸಕ್ತಿ ಹೊಂದಿಲ್ಲ. ಬದಲಾಗಿ, ಅವರು ಇಡೀ ವೀರಶೈವ-ಲಿಂಗಾಯತ ಸಮುದಾಯವನ್ನು ಸನಾತನ ಹಿಂದೂ ಧರ್ಮದಿಂದ ದೂರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು.

ಹಿಂದೂ ಧರ್ಮದ ಪದ್ಧತಿಗಳು ಮತ್ತು ಆಚರಣೆಗಳನ್ನು ಅವಮಾನಿಸುವುದೇ ಕೆಲವು ಮಠಾಧೀಶರ ಉದ್ಯೋಗವಾಗಿದೆ. ಬಸವಣ್ಣನವರ ತತ್ವಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದು ಅವರಿಗೆ ಚಾಳಿಯಾಗಿಬಿಟ್ಟಿದೆ ಎಂದು ಯತ್ನಾಳ್ ಟೀಕಿಸಿದರು. ಅಲ್ಲದೇ, ಹಿಂದೂ ಧರ್ಮದ ಆಚರಣೆಗಳನ್ನು ಅಪಮಾನಿಸುವ ನೀವು, ಬಸವಣ್ಣನ ತತ್ವ ಅನುಸರಿವು ನೀವು ಪಾದ ಪೂಜೆ ಯಾಕೆ ಮಾಡಿಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ಲಿಂಗಾಯತ ಮತ್ತು ವೀರಶೈವ ಧರ್ಮಗಳು ಇನ್ನೂ ಭಾರತ ಸರ್ಕಾರದಿಂದ ಅಧಿಕೃತ ಮಾನ್ಯತೆಯನ್ನು ಪಡೆದಿಲ್ಲ ಎಂಬುದನ್ನೂ ಅವರು ಸ್ಪಷ್ಟಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ