LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಿಚಾರಣೆಗೆ ತೆರಳಿದ್ದ ಪೊಲೀಸರ ಮೇಲೆ ದಂಪತಿ ಹಲ್ಲೆ

ರಾಯಚೂರು, ನವೆಂಬರ್ 12: ರಾಯಚೂರು  ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಟ್ಟೂರು ತಾಂಡಾದಲ್ಲಿ ವಿಚಾರಣೆಗೆ ತೆರಳಿದ್ದ ಪೊಲೀಸರ ಮೇಲೆ ದಂಪತಿ ಹಲ್ಲೆ ನಡೆಸಿದ ಘಟನೆ ಕೇಳಿ ಬಂದಿದೆ. ವಿಚಾರಣೆಗೆಂದು ಬಂದ ಎಎಸ್‌ಐನ ಮೊಬೈಲ್ ಕಸಿದು ಥಳಿಸಿದ್ದಲ್ಲದೇ, ಘಟನೆ ತಿಳಿದು ಸ್ಥಳಕ್ಕೆ ಬಂದ ಪಿಎಸ್​ಐ ಮೇಲೆಯೂ ದಂಪತಿ ಹಲ್ಲೆ ನಡೆಸಿದ್ದಾರೆಂದು ತಿಳಿದು ಬಂದಿದೆ.


ಒಂದೇ ತಾಂಡಾದ ಎರಡು ಕುಟುಂಬಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆ ರಾಮಪ್ಪ ದಂಪತಿಯ ಮೇಲೆ ಮಲ್ಲಪ್ಪ ಎಂಬುವವರು ದೂರು ನೀಡಿದ್ದರು.ಈ ಹಿನ್ನೆಲೆ ವಿಚಾರಣೆಗೆ ತೆರಳಿದ್ದ ಎಎಸ್‌ಐ ವೆಂಕಟಪ್ಪ ನಾಯಕ್ ಹಾಗೂ ತಂಡದ ಮೇಲೆ ಆರೋಪಿಗಳಾದ ರಾಮಪ್ಪ ಕೃಷ್ಣ (35) ಮತ್ತು ಪತ್ನಿ ಸಕ್ಕುಬಾಯಿ (30) ದೌರ್ಜನ್ಯ ಎಸಗಿದ್ದಾರೆ. ವಿಚಾರಣೆ ಸಮಯದಲ್ಲೇ ಏಕಾಏಕಿ ಕೋಪಗೊಂಡ ದಂಪತಿ ಎಎಸ್‌ಐ ಮೇಲೆ ಹಲ್ಲೆ ನಡೆಸಿ, ಅವರ ಬಟ್ಟೆ ಹರಿದು, ಮೊಬೈಲ್ ಒಡೆದು, ಕಂಬಕ್ಕೆ ಕಟ್ಟಿಹಾಕಿ ಹಿಂಸಾತ್ಮಕವಾಗಿ ವರ್ತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಪೊಲೀಸರ ಎದುರೇ ಮಲ್ಲಪ್ಪನ ಮಗ ರಾಘವೇಂದ್ರನನ್ನೂ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ . ಬಳಿಕ ಆರೋಪಿಗಳು ಎಎಸ್‌ಐಗೆ ಜೀವ ಬೆದರಿಕೆಯನ್ನೂ ಒಡ್ಡಿದ್ದಾರೆಂದು ಆರೋಪಿಸಲಾಗಿದೆ.








ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಮುದಗಲ್ ಠಾಣೆಯ ಪಿಎಸ್‌ಐ ವೆಂಕಟೇಶ್ ಅವರ ಮೇಲೆಯೂ ಆರೋಪಿಗಳು ಹಲ್ಲೆ ನಡೆಸಿದ್ದು, ಘಟನೆಯಿಂದ ಎಎಸ್‌ಐ ವೆಂಕಟಪ್ಪ ನಾಯಕ್ ಹಾಗೂ ಪಿಎಸ್‌ಐ ವೆಂಕಟೇಶ್ ಗಂಭೀರವಾಗಿ ಗಾಯಗೊಂಡು ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್