LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದೋಣಿ ಮುಗುಚಿ 7 ಜನರ ಸಾವು

ಶಿವಪುರಿ: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಮಟಟಿಲಾ ಅಣೆಕಟ್ಟಿನಲ್ಲಿ ದೋಣಿ ಮಗುಚಿ ನಾಪತ್ತೆಯಾಗಿದ್ದ 7 ಜನರ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


ಮಂಗಳವಾರ ಸಂಜೆ ಮಟಟಿಲಾ ಅಣೆಕಟ್ಟಿನ ಮಧ್ಯದಲ್ಲಿರುವ ಸಟೋರಿಯಾ ದ್ವೀಪದಲ್ಲಿರುವ ಸಿದ್ಧ ಬಾಬಾ ದೇವಸ್ಥಾನಕ್ಕೆ ಹೋಳಿ ಹಬ್ಬ ಆಡಲು ಹೋಗುತ್ತಿದ್ದ ಭಕ್ತರಿಂದ ತುಂಬಿದ್ದ ದೋಣಿ ಮಗುಚಿ ಬಿದ್ದಿತ್ತು. ಶಿವಪುರಿ ಜಿಲ್ಲೆಯ ಪಿಚೋರ್ ವಿಧಾನಸಭಾ ಕ್ಷೇತ್ರದ ಖಾನಿಯಾಧಾನ ಪೊಲೀಸ್ ಠಾಣೆ ವ್ಯಾಪ್ತಿಯ ರಾಜವನ್ ಗ್ರಾಮದಲ್ಲಿ ಮಂಗಳವಾರ ಈ ಅಪಘಾತ ಸಂಭವಿಸಿದೆ.




ಈ ಅಪಘಾತದಲ್ಲಿ ಏಳು ಜನರು ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದರು. ಎಂಟು ಜನರನ್ನು ರಕ್ಷಿಸಲಾಗಿತ್ತು. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ತಕ್ಷಣ ಸ್ಥಳಕ್ಕೆ ತಲುಪಿದ್ದು, ಮಂಗಳವಾರ ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿತ್ತು. ಕತ್ತಲೆಯಾಗಿದ್ದ ಕಾರಣ ರಕ್ಷಣಾ ತಂಡಕ್ಕೆ ಯಾವುದೇ ಯಶಸ್ಸು ಸಿಕ್ಕಿರಲಿಲ್ಲ.






ಘಟನೆ ನಡೆದ ಸುಮಾರು 18 ಗಂಟೆಗಳ ನಂತರ ಬುಧವಾರ ಬೆಳಗ್ಗಿನ ಹೊತ್ತಿಗೆ, ಎಸ್‌ಡಿಆರ್‌ಎಫ್ ತಂಡವು ಮೊದಲ 6 ಶವಗಳನ್ನು ಒಂದೊಂದಾಗಿ ಪತ್ತೆ ಮಾಡಿತು. ಒಂದು ಶವಕ್ಕಾಗಿ ಶೋಧಾ ಕಾರ್ಯ ಮುಂದುವರಿಸಿದ ಸ್ವಲ್ಪ ಸಮಯದ ನಂತರ, 7ನೇ ಶವವೂ ಪತ್ತೆಯಾಗಿದೆ. ಮೃತರನ್ನು ಶಾರದಾ ಲೋಧಿ (55), ಲೀಲಾ ಲೋಧಿ (40), ರಾಮದೇವಿ ಲೋಧಿ (35), (14), (7), (8), (15) ವರ್ಷದ ಮಕ್ಕಳು ಎಂದು ಗುರುತಿಸಲಾಗಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ