LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ  ದ ಜಡ್ಜ್ ಮೆಂಟ್ ಚಿತ್ರ ಬಿಡುಗಡೆ 

      ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ 'ದ ಜಡ್ಜ್ ಮೆಂಟ್' ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ.


     'ಇತ್ತೀಚಿಗೆ ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ದಿನದಂದು ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಟೀಸರ್ ಸಹ ಬಿಡುಗಡೆಯಾಗಿದ್ದು, ಪ್ರಶಂಸೆಯ ಮಾತುಗಳು ಕೇಳಿ ಬರುತ್ತದೆ. ಮತ್ತೊಂದು ಖುಷಿಯ ವಿಚಾರವೆಂದರೆ ನಮ್ಮ ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿರುವ ಪ್ರತಿಷ್ಠಿತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ, ಮುಂದೆ ನಮ್ಮ ಸಂಸ್ಥೆಯ ಚಿತ್ರಗಳ ನಿರ್ಮಾಣದಲ್ಲೂ ಸಹಯೋಗ ನೀಡುವುದಾಗಿ ತಿಳಿಸಿದೆ.  ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರವನ್ನು ಸದ್ಯದಲ್ಲೇ ತೆರೆಗೆ ತರಲಾಗುವುದು" ಎಂದು ನಿರ್ಮಾಪಕ ಹಾಗೂ ನಿರ್ದೇಶಕ ಗುರುರಾಜ ಕುಲಕರ್ಣಿ  ತಿಳಿಸಿದ್ದಾರೆ.


     ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಕೆಂಪರಾಜ್ ಸಂಕಲನ ಚಿತ್ರಕ್ಕಿದೆ.   ದಿಗಂತ್ , ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರ ತಾರಾಬಳಗವಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್