Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಾನಂದ ನೀಲಣ್ಣವರ ಈತನ ಶಿವಂ ಅಸೋಸಿಯೇಷನ ಕಛೇರಿಗಳು ಸೀಜ್. 

ಬೆಳಗಾವಿ : ಶಿವಂ ಅಸೋಸಿಯನ್ ನ ಶಿವಾನಂದ ನೀಲಣ್ಣವರಗೆ ಸೇರಿದ ಕಚೇರಿಗಳ ಮೇಲೆ ನಡೆದ ದಾಳಿ ಪ್ರಕರಣ ದಿನೇದಿನೇ ಭಾರೀ ತಿರುವು ಪಡೆಯುತ್ತಿದ್ದು, ಇದೀಗ ತನಿಖೆ ಮತ್ತಷ್ಟು ಗಂಭೀರ ಹಂತ ಪಡೆದುಕೊಂಡಿದೆ.  ಅಧಿಕಾರಿಗಳು ಶಿವಾನಂದ ನೀಲಣ್ಣನವರ ಗೆ  ಸಂಬಂಧಿಸಿದ ಮೂರು ಕಚೇರಿಗಳು ಹಾಗೂ ಅಪಾರ್ಟ್ಮೆಂಟ್ನಲ್ಲಿದ್ದ ಕೆಲವು ಪ್ಲಾಟ್ ಗಳನ್ನು ಸೀಜ್ ಮಾಡಿದ್ದಾರೆ. 
ದಾಳಿಯ ವೇಳೆ ಕಚೇರಿಗಳಲ್ಲಿದ್ದ ಕಂಪ್ಯೂಟರಗಳು, ಲ್ಯಾಪಟ್ಯಾಪಗಳು , ಮಹತ್ವದ ದಾಖಲೆಗಳು ಹಾಗೂ ನೂರಾರು ಕೋಟಿ ರೂಪಾಯಿ ಮೌಲ್ಯದ ಬಾಂಡಗಳನ್ನು  ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ ಮೊಬೈಲ್ ಫೋನ್ ಕೂಡ ಸೀಜ್ ಮಾಡಲಾಗಿದ್ದು, ಡಿಜಿಟಲ್ ವ್ಯವಹಾರಗಳ ಮಾಹಿತಿ ಸಂಗ್ರಹಿಸಲು ತಾಂತ್ರಿಕ ಪರಿಶೀಲನೆ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ.
ಅಧಿಕಾರಿಗಳು ಶಿವಾನಂದ ನೀಲಣ್ಣನವರ  ಅವರನ್ನು ತಡರಾತ್ರಿ ವರೆಗೆ ತೀವು ವಿಚಾರಣೆಗೆ ಒಳಪಡಿಸಿದ್ದು, ಮತ್ತಷ್ಟು ದಾಖಲೆ ಹಾಗೂ ಹಣಕಾಸು ವ್ಯವಹಾರಗಳ ವಿವರ ನೀಡುವಂತೆ ಸೂಚಿಸಿ, ಶುಕ್ರವಾರ ಬೆಳಿಗ್ಗೆಯಿಂದಲೇ  ಮತ್ತೆ ವಿಚಾರಣೆ ಪ್ರಾರಂಭಿಸಿದ ಅಧಿಕಾರಿಗಳು, ಶಿವಬಸವ ನಗರದ ನಿವಾಸದಲ್ಲಿದ್ದ ತೆರಳಿ ಅಗತ್ಯೆ ವಿರುದ್ದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. 
ಅಧಿಕಾರಿಗಳು ವಿಚಾರಣೆ ವೇಳೆ ಶಿವಾನಂದ ನೀಲಣ್ಣನವರ , ಸುಮಾರು 35 ಸಾವಿರ ಹೂಡಿಕೆದಾರರು ಇದ್ದಾರೆ. ಒಟ್ಟು 2500 ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆಯನ್ನು ಪಡೆದುಕೊಂಡಿದೆ. ಸಾರ್ಜಜನಿಕರಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಸಾಧ್ಯತೆ ಹೆಚ್ಚಾಗಿದೆ.
ಶನಿವಾರ ಬೆಳಿಗ್ಗೆ ಸಿಐಡಿ ಅಧಿಕಾರಿಗಳ ತಂಡ ಬೆಳಗಾವಿಗೆ ಎಂಟ್ರಿ ಕೊಡಲಿದ್ದು,  ಈ ಪ್ರಕರಣದಲ್ಲಿ ಆರ್ಬಿಐ ಹಾಗೂ ಎಸ್ ಬಿ ಐ  ಮಾರ್ಗಸೂಚಿಗಳನ್ನು ಸಂಪೂರ್ಣ ಉಲ್ಲಂಘಿಸಿ, ಯಾವುದೇ ಅಧಿಕೃತ ಅನುಮತಿ ಪಡೆಯದೇ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಆನ್ಲೈನ್ ಮೂಲಕ ವರ್ಗಾವಣೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಇದಲ್ಲದೆ ಅಧಿಕಾರಿಗಳು ಫ್ರೀಜ್ ಮಾಡಿರುವ ನಾಲ್ಕು ಬ್ಯಾಂಕ್ ಖಾತೆಗಳಲ್ಲಿ ಸುಮಾರು 400 ಕೋಟಿ ರೂಪಾಯಿ ಠೇವಣಿ ಇರುವ ಮಾಹಿತಿ ದೊರೆತಿದ್ದು, ಉಳಿದ ಹಣ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಸಾಮಾನ್ಯ ಜನರು 10 ಲಕ್ಷಕ್ಕಿಂತ ಹೆಚ್ಚಿನ ಹಣ ವರ್ಗಾವಣೆ ಮಾಡಿದರೂ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡುವ ಪರಿಸ್ಥಿತಿಯಲ್ಲಿ, ಸಾವಿರಾರು ಕೋಟಿ ರೂಪಾಯಿ ಆನ್ಲೈನ್ ವ್ಯವಹಾರ ನಡೆದಿದ್ದರೂ ಸಂಬಂಧಿತ  ಇಲಾಖೆಗಳ ಗಮನಕ್ಕೆ ಹೇಗೆ ಬಂದಿಲ್ಲ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*