LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು - ಕುರಬೇಟ

ಯರಗಟ್ಟಿ: ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿ ಶಾಂತಿ ನೆಲೆಸಲು ಅಗತ್ಯವಾದ ಕಾನೂನುಗಳ ಮಾಹಿತಿಯನ್ನು ಪಡೆದು ಸ್ವತಃ ಅನುಸರಿಸುವ ಮೂಲಕ ಇತರರಿಗೆ ಮಾದರಿಯಾಗಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಎಂದು ರಾಮದುರ್ಗ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಮುಖ್ಯಪೇದೆ ಎಲ್.ಎಂ. ಕುರಬೇಟ ಹೇಳಿದರು.
ಪಟ್ಟಣದ ಶ್ರೀ ಸಿಎಂ ಮಾಮನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ರೂಪಿಸಿರುವ ಅಕ್ಕ ಪಡೆಯ ಕಾರ್ಯ ಯೋಜನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆ ಮಾಡುವಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿಯುತ ವರ್ತನೆಯನ್ನು ನಿರ್ವಹಿಸಬೇಕಾದ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.
ಸವದತ್ತಿ ಪೊಲೀಸ್ ಠಾಣೆಯ ಮಹಿಳಾ ಮುಖ್ಯಪೇದೆ ಎಸ್.ವಿ. ಹೊಸೂರ ಅವರು ಮಾತನಾಡಿ, ಸಮಾಜದಲ್ಲಿ ಮೌಲ್ಯಗಳು ಮರೆಯಾಗುತ್ತಿರುವುದರಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಮೌಲ್ಯದ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಆರ್.ಎಸ್. ಮರಿಗೌಡರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುರುಗೋಡ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ನಿರೀಕ್ಷಕರಾದ ವಿಜಯಾ ಸ್ವಾಮಿ, ಡಾ. ಸುನಂದಾ ಮಾದರ, ವಿಜಯಲಕ್ಷ್ಮಿ ಬದ್ದಿ, ಸಿದ್ದಲಿಂಗಪ್ಪ ಗಾಳಿ, ಶಂಕರ ಲಗಳಿ, ಡಾ. ರಾಜಶೇಖರ ಬಿರಾದಾರ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಧಿಕಾ ಶಿದ್ದನ್ನವರ ನಿರೂಪಿಸಿದರು, ಡಾ. ಸುನೀತಾ ಸೊಪ್ಪಡ್ಲ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್