LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: 

ಮುಂದಿನ ಕೆಲ ದಿನಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್: 

ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಲಿದೆ. ಚಿಕ್ಕಮಗಳೂರು ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಸುರಕ್ಷಿತವಾಗಿರುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಮಳೆ? 

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ವೇಗವಾದ ಗಾಳಿಯೊಂದಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಜೂನ್ 19ರ ವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕದಲ್ಲಿ ಸಾಧಾರಣ ಮಳೆ ನಿರೀಕ್ಷೆ: 

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ:

ಬೆಂಗಳೂರಿನಲ್ಲಿಂದು ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಗರಿಷ್ಠ ತಾಪಮಾನ 33-34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23-24 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮಳೆ ಅಬ್ಬರ: 

ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವೆಡೆ ಮಳೆ ಆಗುತ್ತಿದೆ. ಮೈಸೂರ, ಹಾವೇರಿ, ಚಿಕ್ಕಮಗಳೂರು, ಕೊಪ್ಪಳ, ಬಳ್ಳಾರಿ ಸೇರಿದಂತೆ ಹಲೆವೆಡೆ ವರುಣ ಅಬ್ಬರಿಸಿದ್ದಾನೆ. ಮೈಸೂರು ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಮತ್ತು ಎರಡು ಹಸುಗಳು ಸಾವನ್ನಪ್ಪಿವೆ. ಇನ್ನು ಬಳ್ಳಾರಿ ಜಿಲ್ಲೆಯಲ್ಲೂ ಸಹ ಸಿಡಿಲಿಗೆ ಓರ್ವ ಬಲಿಯಾಗಿರುವ ಘಟನೆ ಶನಿವಾರ ನಡೆದಿದೆ.

ಬಿರುಗಾಳಿ ಸಹಿತ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಅಪಾರ ಬೆಳೆ ಹಾನಿಯಾಗಿದೆ. ಹಲವೆಡೆ ಮನೆಗಳು ಜಖಂಗೊಂಡಿವೆ. ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅಸ್ತವ್ಯಸ್ತ ಉಂಟಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್