LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಇಂದು ಶ್ರೀ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವ 


  ರಾಯಬಾಗ,ಮೇ,೦೫:  ಶ್ರೀ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವ  ಬರುವ ಬುಧವಾರ (ಮೇ ೬ರಂದು) ಭವ್ಯವಾಗಿ ಪ್ರಾರಂಭವಾಗಲಿದೆ .ಜಾತ್ರೆಯ ಉದ್ಘಾಟನಾ ಸಮಾರಂಭಕ್ಕೆ ಕನ್ನೆರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರು ಆಗಮಿಸುತ್ತಿದ್ದಾರೆ   
ಈ ಕುರಿತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಣಯ ಪಾಟೀಲ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ನೀಡಿದ್ದು, ಐದು ವರ್ಷಕ್ಕೊಮ್ಮೆ ನಡೆಯುವ ಶ್ರೀ ಮಹಾಲಕ್ಷ್ಮಿ ಜಾತ್ರೆ ಮಹೋತ್ಸವವು ಈ ಭಾಗದ ಅತಿ ದೊಡ್ಡ ಭಂಡಾರದ ಜಾತ್ರೆಗಳಲ್ಲಿ ಒಂದಾಗಿದೆ. ಜಾತ್ರೆಯ ಅಂಗವಾಗಿ ಭಕ್ತರಿಗಾಗಿ ವಿಶೇಷ ಪೂಜೆಗಳು, ಆಧ್ಯಾತ್ಮಿಕ ಕಾರ್ಯಕ್ರಮಗಳು ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಾನು ಸಹ ಖುದ್ದಾಗಿ ಈ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದೇನೆ, ಎಂದು ತಿಳಿಸಿದ್ದಾರೆ.
ಜಾತ್ರೆಯ ಸಂದರ್ಭದಲ್ಲಿ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ದೇವಿಯ ದರ್ಶನ ಹಾಗೂ ಆಶೀರ್ವಾದ ಪಡೆಯಲು ದೂರದೂರಿನಿಂದ ಭಕ್ತರು ಆಗಮಿಸಲಿದ್ದಾರೆ. ಭಂಡಾರದ ವ್ಯವಸ್ಥೆಯೂ ವಿಜೃಂಭಣೆಯಿಂದ ನಡೆಯಲಿದೆ.
ಕ್ಷೇತ್ರದ ಸಮಸ್ತ ಭಕ್ತಮಂಡಳಿ ಹಾಗೂ ಸಾರ್ವಜನಿಕರು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಹಾಗೂ ಶ್ರೀ ಮಹಾಲಕ್ಷ್ಮಿ ದೇವಿಯ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ಪ್ರಣಯ ಪಾಟೀಲ ಅವರು ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್