LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇಂದು ಮೊದಲ ವರ್ಷದ ರಾಷ್ಟ್ರೀಯ ಬಾಹ್ಯಾಕಾಶ ದಿನ

ಕಳೆದ ವರ್ಷ 2023 ಆಗಸ್ಟ್ 23 ರಂದು ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿಯ ‘ಶಿವ ಶಕ್ತಿ’ ಬಿಂದುವಿನಲ್ಲಿ ಯಶಸ್ವಿಯಾಗಿ ಇಳಿಯಿತು. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ 3 ಸಾಫ್ಟ್‌ ಲ್ಯಾಂಡಿಂಗ್‌ ಯಶಸ್ವಿಯಾದ ಕ್ಷಣವಿದು. ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಲ್ಯಾಂಡರ್ ಇಳಿಸಿದ ಮೊದಲ ರಾಷ್ಟ್ರ ಎನ್ನುವ ಹೆಗ್ಗಳಿಕೆಗೆ ಭಾರತವು ಪಾತ್ರವಾಯಿತು. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲು ಮುಂದಾಗಿದೆ.

ಆಗಸ್ಟ್ 26 ರಂದು ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಧಾನ ಕಚೇರಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು, ನಮ್ಮ ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲು ನಾವು ನಿರ್ಧರಿಸಿದ್ದೇವೆ” ಎಂದು ತಿಳಿಸಿದ್ದರು. ಈ ಮೂಲಕ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದ್ದರು.

ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುತ್ತಿದೆ. ಭಾರತವು ತನ್ನ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು (ಎನ್‌ಎಸ್‌ಪಿಡಿ -2024) 2024ರ ಆಗಸ್ಟ್‌ 23ರಂದು ‘ಚಂದ್ರನನ್ನು ಸ್ಪರ್ಶಿಸುವಾಗ ಜೀವನವನ್ನು ಸ್ಪರ್ಶಿಸುವುದು: ಭಾರತದ ಬಾಹ್ಯಾಕಾಶ ಕಥೆ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ದೇಶದ ಬಾಹ್ಯಾಕಾಶ ಸಾಧನೆಗಳನ್ನು ಪ್ರದರ್ಶಿಸಲು ಕೇಂದ್ರವು ಸರಿಸುಮಾರು ಒಂದು ತಿಂಗಳ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್