LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಹುಲಿ ಕೊಂದು ಮಾಂಸ ತಿಂದ ಇಬ್ಬರ ಬಂಧನ


ನುವಾಪಾಡಾ (ಒಡಿಶಾ) : ಜಿಲ್ಲೆಯಲ್ಲಿ 4 ಬೇಟೆಗಾರರು ಹುಲಿಯನ್ನು ಬೇಟೆಯಾಡಿ ಅದರ ಮಾಂಸವನ್ನು ತಿಂದಿರುವ ಆಘಾತಕಾರಿ ಘಟನೆ ನಡೆದಿದೆ. ಘಟನೆಯಲ್ಲಿ ನುವಾಪಾಡಾ ಕೋಮನ ಅರಣ್ಯ ಇಲಾಖೆ ಸಿಬ್ಬಂದಿ 2 ಬೇಟೆಗಾರರನ್ನು ಬಂಧಿಸಿದ್ದಾರೆ.


ಪುಷ್ಟಮ್ ಚಿಂದಾ ಮತ್ತು ಟಿಕು ಚಿಂದಾ ಬಂಧಿತರು. ಇನ್ನಿಬ್ಬರು ಬೇಟೆಗಾರರಾದ ದೇವೇಂದ್ರ ಚಿಂದಾ ಮತ್ತು ಜಗಬಂಧು ಚಿಂದಾ ಎಂಬುವವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈಗಾಗಲೇ ಹುಲಿ ಚರ್ಮ, ಮಾಂಸ, ಉಗುರು, ಹಲ್ಲುಗಳನ್ನು ವಶಪಡಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.


ಬೇಟೆಗಾರರ ಪ್ರಕಾರ, ಕಾಡು ಹಂದಿ ಬೇಟೆಯಾಡಲು ಕಾಡಿನಲ್ಲಿ ವಿದ್ಯುತ್ ತಂತಿಯನ್ನ ಹರಡಿದ್ದಾರೆ. ಆದರೆ ಕಾಡುಹಂದಿಯ ಬದಲು ಹುಲಿ ಬಿದ್ದಿದೆ. ಅದರ ನಂತರ, ಹುಲಿಯ ಕಾಲುಗಳು, ಬಾಲ, ಉಗುರುಗಳು ಮತ್ತು ಹಲ್ಲುಗಳನ್ನು ಪ್ರತ್ಯೇಕವಾಗಿ ಕತ್ತರಿಸಿದ್ದಾರೆ. ನಂತರ 4 ಮಂದಿ ಹುಲಿ ಮಾಂಸವನ್ನು ಬೇಯಿಸಿ ತಿಂದಿದ್ದಾರೆ.




ಅಕ್ರಮ ವನ್ಯಜೀವಿ ಬೇಟೆ ಪ್ರಕರಣದಲ್ಲಿ ಕೋಮ್ನಾ ಅರಣ್ಯ ಇಲಾಖೆ ಸಿಬ್ಬಂದಿ ಇಬ್ಬರು ಬೇಟೆಗಾರರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರು ಭಾಗಿಯಾಗಿರುವುದು ಪತ್ತೆಯಾಗಿದೆ. ಘಟನೆ ಕುರಿತು ಕೋಮ್ನಾ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್