LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಮ್ಮು-ಕಾಶ್ಮೀರ ಗಡಿಯಲ್ಲಿ ಇಬ್ಬರು ಉಗ್ರರ ಹತ್ಯೆ

ರಜೌರಿ: ಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ಹೊಡೆದುರುಳಿಸಿದೆ. ಇಲ್ಲಿನ ರಾಜೌರಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆಯಿತು.

ಜಮ್ಮು-ಕಾಶ್ಮೀರ ಪೊಲೀಸ್ ಹಾಗು ಗುಪ್ತಚರ ಇಲಾಖೆ ಉಗ್ರರ ಒಳನುಸುಳುವಿಕೆಯ ಕುರಿತು ಸುಳಿವು ನೀಡಿತ್ತು. ಈ ಮಾಹಿತಿ ಆಧರಿಸಿ ಭಯೋತ್ಪಾದಕರ ಚಲನವಲನ ಪತ್ತೆ ಹಚ್ಚಿದ ಯೋಧರು ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಸೇನೆ 'ಎಕ್ಸ್​'ನಲ್ಲಿ ಪೋಸ್ಟ್​ ಮಾಡಿದೆ. 'ಉಗ್ರರ ಒಳನುಸುಳುವಿಕೆ ಸಂಬಂಧಿಸಿದಂತೆ ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸರ ಮಾಹಿತಿಯ ಆಧಾರದಡಿ ಸೆಪ್ಟೆಂಬರ್ 8 ಮತ್ತು 9ರ ಮಧ್ಯರಾತ್ರಿ ನೌಶೇರಾದ ಲಾಮ್ ಸೆಕ್ಟರ್ ಪ್ರದೇಶದಲ್ಲಿ ಒಳನುಸುಳುವಿಕೆಯ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಇಬ್ಬರು ನುಸುಳುಕೋರರನ್ನು ಹತ್ಯೆಗೈಯಲಾಗಿದೆ. ಎರಡು AK-47 ಗನ್, ಒಂದು ಪಿಸ್ತೂಲ್​ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ' ಎಂದು ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್