LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿ ವಿಜಯೋತ್ಸವದ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ

ಮಂಗಳೂರು(ದಕ್ಷಿಣ ಕನ್ನಡ): ನಗರದ ಹೊರವಲಯದ ಬೋಳಿಯಾರು ಎಂಬಲ್ಲಿ ಬಿಜೆಪಿ ವಿಜಯೋತ್ಸವದ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಸ್ಥಳವೊಂದರ ಮುಂದೆ ಘೋಷಣೆ ಕೂಗಿರುವ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ.


ಈ ಘಟನೆಗೂ ಮೊದಲು ಧಾರ್ಮಿಕ ಸ್ಥಳದ ಮುಂಭಾಗ ನಡೆದ ಗಲಾಟೆಯ ದೃಶ್ಯ ಇದೀಗ ದೊರೆತಿದೆ. ನರೇಂದ್ರ ಮೋದಿ ಅವರು ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಿರುವ ಹಿನ್ನೆಲೆಯಲ್ಲಿ ವಿಜಯೋತ್ಸವ ನಡೆಯುತ್ತಿತ್ತು. ಅದರಂತೆ ಧಾರ್ಮಿಕ ಸ್ಥಳವೊಂದರ ಮುಂದೆ ವಿಜಯೋತ್ಸವ ಮೆರವಣಿಗೆ ಸಾಗುತ್ತಿತ್ತು. ವಿಜಯೋತ್ಸವದ ಬಳಿಕ ಧಾರ್ಮಿಕ ಸ್ಥಳದ ಸಮೀಪ ಬೈಕ್​ನಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರು 'ಬೋಲೋ ಭಾರತ್ ಮಾತಾ ಕೀ ಜೈ' ಎಂದು ಘೋಷಣೆ ಕೂಗಿದ್ದಾರೆ. ಇದರ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.


ಈ ವೇಳೆ ಧಾರ್ಮಿಕ ಸ್ಥಳದ ಮುಂಭಾಗದಲ್ಲಿದ್ದ ಯುವಕರು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಅಲ್ಲಿಯೇ ಸ್ವಲ್ಪ ದೂರವಿರುವ ಬಾರ್ ಮುಂಭಾಗ ದಾಂದಲೆ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದಿದ್ದಾರೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆವಹಿಸಲಾಗಿದೆ. ಬೋಳಿಯಾರುವಿನಲ್ಲಿ ಮೂರು ಕೆಎಸ್ಆರ್​ಪಿ ತುಕಡಿ ಬೀಡುಬಿಟ್ಟಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ