LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮಹಾರಾಷ್ಟ್ರದಲ್ಲೂ ನೀಟ್ ಪ್ರಶ್ನೆ ಪತ್ರಿಕೆ ಲೀಕ್​: ಇಬ್ಬರು ಶಿಕ್ಷಕರ ಬಂಧನ

ಲಾತೂರ್​ : ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಮಹಾರಾಷ್ಟ್ರದ ಲಾತೂರ್​ನಲ್ಲೂ ಸದ್ದು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ನಾಂದೇಡ್‌ನ ಎಟಿಎಸ್‌ ತಂಡವು ಶನಿವಾರ ಬಂಧಿಸಿದೆ.


ಸಂಜಯ್​ ತುಕಾರಾಮ್​ ಜಾಧವ್​ ಮತ್ತು ಜಾಲೀಲ್​ ಉಮಾರ್​ ಖಾನ್​ ಪಠಾಣ್​​ ಅವರನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಶಂಕೆ ಆರೋಪದ ಮೇಲೆ ಬಂಧಿಸಲಾಗಿದ್ದು, ಭಾನುವಾರ ನೋಟಿಸ್​ ನೀಡಿ ಬಿಡುಗಡೆ ಮಾಡಲಾಗಿತು. ಆದರೆ, ಭಾನುವಾರ ಸಂಜೆ ಜಿಲ್ಲಾ ಪರಿಷದ್​ ಶಾಲೆಯ ಶಿಕ್ಷಕರಾಗಿದ್ದ ಸಂಜಯ್​ ತುಕಾರಂ ಜಾಧವ್​ ಮತ್ತು ಜಾಲೀಲ್​ ಉಮಾರ್​ ಖಾನ್​ ಬಂಧಿಸಲಾಗಿದೆ. ಸದ್ಯ ಪ್ರಕರಣದಲ್ಲಿ ನಾಲ್ವರ ಮೇಲೆ ಪ್ರಕರಣ ದಾಖಲಿಸಲಾಗಿದೆ.


ಲಾತೂರ್‌ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೆಹಲಿಯ ಈರಣ್ಣ ಮಷ್ಣಜಿ ಕೊಂಗಾಲ್ವಾರ್ ಮತ್ತು ಗಂಗಾಧರ್ (ಪೂರ್ಣ ಹೆಸರು ಮರೆ ಮಾಚಲಾಗಿದೆ) ಸೇರಿದಂತೆ ನಾಲ್ವರ ವಿರುದ್ಧ ಸೆಕ್ಷನ್​ 3(ವಿ), ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ 4 ಮತ್ತು 10, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420, 120 (ಬಿ) ಮೇಲೆ ಪ್ರಕರಣ ದಾಖಲಿಸಲಾಗಿದೆ.


ಜೊತೆಗೆ​ ಲಾತೂರ್ ಸಿಟಿ ಉಪವಿಭಾಗದ ಪೊಲೀಸ್ ಅಧಿಕಾರಿ ಭಗವತ್ ಫಂಡೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್​ಐಟಿ) ರಚಿಸಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ನಾಂದೇಡ್​ನ ಎಟಿಎಸ್​ ತಂಡವೂ ಶನಿವಾರ ಲಾತೂರ್​ನಲ್ಲಿ ನೀಟ್​ ಪರೀಕ್ಷೆ ಅಕ್ರಮದ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ದಾಳಿ ನಡೆಸಿತು. ಈ ಇಬ್ಬರು ಶಿಕ್ಷಕರು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಶಂಕಿಸಲಾಗಿದೆ.


ಲಾತೂರ್​ ನಿವಾಸಿಯಾಗಿರುವ ಸಂಜಯ್​ ಜಾಧವ್​​ ಸೋಲಾಪುರದ ಟಕ್ಲಿ ಜಿಲ್ಲಾ ಪರಿಷದ್​​ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿನ ಅಂಬಜೊಗಯ್​ ರಸ್ತೆಯಲ್ಲಿ ವಾಸವಾಗಿರುವ ಉಮರ್​ ಖಾನ್​ ಪಠಾಣ್​​​ ಲಾತೂರ್​ ತಾಲೂಕಿನಲ್ಲಿರುವ ಕಟ್ಪುರ್​​ನ ಜಿಲ್ಲಾ ಪರಿಷದ್​ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇಬ್ಬರೂ ಲಾತೂರ್​ನಲ್ಲಿ ಖಾಸಗಿಯಾಗಿ ಕೋಚಿಂಗ್​ ಕೇಂದ್ರವನ್ನು ನಡೆಸುತ್ತಿದ್ದು, ಶನಿವಾರ ಇಬ್ಬರ ಬಂಧನದ ಬಳಿಕ ನಾಂದೇಡ್​ನ ಎಟಿಎಸ್​ ರಾತ್ರಿ ಪೂರ್ತಿ ತನಿಖೆಯನ್ನು ನಡೆಸಿದರು. ಸದ್ಯ ಶಿವಾಜಿನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಗವತ್​​ ಪಂಡೆ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.


ಈ ಇಡೀ ಪ್ರಕರಣದಿಂದ ಲಾತೂರ್ ಅಕಾಡೆಮಿಗಳ ಹೆಸರಿಗೆ ಧಕ್ಕೆ ಉಂಟಾಗಿದ್ದು, ಭವಿಷ್ಯದಲ್ಲಿ ಇನ್ನು ಕೆಲವರ ಹೆಸರು ಪ್ರಕರಣದಲ್ಲಿ ಸೇರಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ