LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಇಬ್ಬರು ಉಗ್ರರ ಎನ್​ಕೌಂಟರ್

ಶ್ರೀನಗರ,16: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ  ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತೀಯ ಸೇನೆ ಗುರುವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ಇಬ್ಬರು ಭಯೋತ್ಪಾದಕರನ್ನು ಎನ್​ಕೌಂಟರ್​​ನಲ್ಲಿ  ಹತ್ಯೆ ಮಾಡಲಾಗಿದೆ. ತಂಗ್‌ಧರ್ ಸೆಕ್ಟರ್‌ನ ಬೇಲಿಯ ಇನ್ನೊಂದು ಬದಿಯಲ್ಲಿ ಶವಗಳು ಬಿದ್ದಿರುವುದು ಕಂಡುಬಂದಿದೆ.

ಬಾರಾಮುಲ್ಲಾ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಉತ್ತರ ಕಾಶ್ಮೀರದ ಕುಪ್ವಾರದ ತಂಗ್‌ಧರ್ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭದ್ರತಾ ಪಡೆಗಳು ಪ್ರಮುಖ ಭಯೋತ್ಪಾದಕರ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿವೆ. ಒಳನುಸುಳುವಿಕೆ ಯತ್ನವನ್ನು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ವಿಫಲಗೊಳಿಸಿತು.

ಮೇ 20ರಂದು ಚುನಾವಣೆ ನಡೆಯಲಿರುವ ಕುಪ್ವಾರದ ಈ ಪ್ರದೇಶವು ಬಾರಾಮುಲ್ಲಾ ಸಂಸದೀಯ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಶ್ರೀನಗರದಲ್ಲಿ ದಾಖಲೆ ಮಟ್ಟದ ಮತದಾನದ ನಂತರ, ಬಾರಾಮುಲ್ಲಾ ಮತ್ತು ಉತ್ತರ ಕಾಶ್ಮೀರದಲ್ಲಿ ಹೆಚ್ಚಿನ ಮತದಾನದ ಪ್ರಮಾಣವು ಕಂಡುಬರಬಹುದು ಎಂದು ನಿರೀಕ್ಷಿಸಲಾಗಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಇನ್ನೊಂದು ಬದಿಯಲ್ಲಿ ಒಳನುಸುಳುತ್ತಿರುವ ಉಗ್ರರ 4 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹೆಚ್ಚಿನ ಭಯೋತ್ಪಾದಕರ ಪತ್ತೆಗಾಗಿ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಳೆದ ತಿಂಗಳು ಇದೇ ರೀತಿಯ ಘಟನೆಯಲ್ಲಿ, ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಎಲ್ಒಸಿ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದ ನಂತರ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್