LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಉದಯವಾಣಿ ಪತ್ರಕರ್ತ ಬಸವರಾಜ ಚಿನಗುಡಿ ಅವರು ಕೀಯಾ ಸೈರಸ್ ವೆರಿಯಂಟ್ ಕಾರನ್ನು ಅದ್ದೂರಿಯಾಗಿ ಅನಾವರಣ

 

ಹುಬ್ಬಳ್ಳಿ: ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಈಗಾಗಲೇ ಹೊಸ ಸಂಚಲನ ಮೂಡಿಸಿರುವ ಕೀಯಾ ಸೈರಸ್ ಕಾರಿನ ಅನಾವರಣ ಕಾರ್ಯಕ್ರಮವು ನಗರದ ಹೃದಯಭಾಗದಲ್ಲಿರುವ ನಾಗಶಾಂತಿ ಕೀಯಾ ಶೋರೂಮ್ನಲ್ಲಿ ಜರುಗಿತು. ಈ ನೂತನ ಮಾದರಿ ಕಾರನ್ನು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಚನ್ನಮ್ಮನ ಕಿತ್ತೂರು ತಾಲೂಕು ಘಟಕದ ಅಧ್ಯಕ್ಷರು ಹಾಗೂ ಉದಯವಾಣಿ ಪತ್ರಿಕೆ ವರದಿಗಾರರಾದ ಬಸವರಾಜ ಚಿನಗುಡಿ ಅವರು ಉದ್ಘಾಟಿಸಿ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಹಕರ ಸುರಕ್ಷತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನಕ್ಕೆ ಹೆಸರಾಗಿರುವ ಕೀಯಾ ಸಂಸ್ಥೆಯ ಸೈರಸ್ ಮಾದರಿಯು ಮಾರುಕಟ್ಟೆಯಲ್ಲಿ ದೊಡ್ಡ ಯಶಸ್ಸು ಕಾಣಲಿ ಎಂದು ಹಾರೈಸಿದರು.

ಆಕರ್ಷಕ ವಿನ್ಯಾಸ ಮತ್ತು ಸ್ಮಾರ್ಟ್ ಫೀಚರ್ಸ್ಗಳ ಮೂಲಕ ವಾಹನ ಪ್ರೇಮಿಗಳ ಗಮನ ಸೆಳೆಯುತ್ತಿರುವ ಈ ಕಾರಿನ ಕುರಿತು ನಾಗಶಾಂತಿ ಕೀಯಾ ಶೋರೂಮ್ನಲ್ಲಿ ಗ್ರಾಹಕರಿಂದ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ಈ ವೇಳೆ ಶೋರೂಮ್ನ ಜನರಲ್ ಮ್ಯಾನೇಜರ್ ಸೋಹನ್ ಗೌಡ, ಮಹಾಂತೇಶ್ ಮತ್ತಿ, ಅನಿಲ್ರಾಜ, ಅರುಣ ಲಾಡ, ಶೇಖರ್ ಸೇರಿದಂತೆ ಶೋರೂಮ್ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್