LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ 

 
 
ಬಳ್ಳಾರಿ,ಮೇ.೦9 ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಬಳ್ಳಾರಿ ಜಿಲ್ಲಾ ಸಮಿತಿಯಿಂದ  ಸಂಘದ ಗೌರವಾಧ್ಯಕ್ಷರಾದ  ಎ.ಶಾಂತಾ ಹಾಗೂ ಅಧ್ಯಕ್ಷೆ ಗೀತಾರವರ ನೇತೃತ್ವದಲ್ಲಿ ಜಿಲ್ಲಾ ಡಿಹೆಚ್‌ಓರವರಿಗೆ ಡಿ.ಎಲ್.ಓ ಮೂಲಕ ಮನವಿ ಪತ್ರವನ್ನು ಸಲ್ಲಿಸಲಾಯಿತು.
ರಾಜ್ಯದ ಆಶಾ ಕಾರ್ಯಕರ್ತೆಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವರು. ಮುಖ್ಯವಾಗಿ ಕಳೆದ ಒಂದು ವರ್ಷದಿಂದ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ - ಪ್ರೋತ್ಸಾಹಧನ ಪ್ರತೀ ತಿಂಗಳು ಬರುತ್ತಿಲ್ಲ. ಈಗಲೂ ೩-೪ ತಿಂಗಳವರೆಗೆ ಕೇಂದ್ರದ ಪ್ರೋತ್ಸಾಹಧನ ಬಾಕಿ ಇದೆ.೧-೨ ತಿಂಗಳ ಗೌರವಧನ ಬಾಕಿ ಇದೆ.ಪ್ರತೀ ತಿಂಗಳು ವೇತನ ನಿಗದಿತವಾಗಿ ಬರುತ್ತಿಲ್ಲ. ಆಶಾ ಕಾರ್ಯಕರ್ತೆಯರು ಕೆಲಸ ಮಾಡಿದಷ್ಟುಕೇಂದ್ರದ ಪ್ರೋತ್ಸಾಹಧನ ಬರುತ್ತಿಲ್ಲ. ಹಲವಾರು ವರ್ಷಗಳಿಂದ ಬಾಕಿ ಇರುವ ವಿವಿಧ ಕಂಪೋನೆAಟ್‌ಗಳ ಹಣ ಬಿಡುಗಡೆಆಗಿಲ್ಲ. (ಟಿಬಿ, ಟಿಬಿಐ, ಎನ್ಸಿಡಿಇತ್ಯಾದಿ) ಹಲವಾರು ಆಶಾ ಕಾರ್ಯಕರ್ತೆಯರಗೌರವಧನ, ಪ್ರೋತ್ಸಾಹಧನ ಹಲವಾರು ತಿಂಗಳು ಕಡಿತ ಮಾಡಲಾಗಿದೆ. ಜಿಲ್ಲಾ, ತಾಲೂಕು ಹಂತದಲ್ಲಿ ಸಮಸ್ಯೆಗಳ ಬಗ್ಗೆ ಬಗೆಹರಿಸಲು ಕೇಳಿದರೆ, ರಾಜ್ಯದಿಂದಇರುವ ಸಮಸ್ಯೆಯೆಂದು ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಒಟ್ಟಾರೆಕಾರ್ಯಕರ್ತೆಯರು ಸಂಕಷ್ಟದಲ್ಲಿದ್ದಾರೆ.
ಮತ್ತೊAದೆಡೆ ಉಪ ನಿರ್ದೇಶಕರು, ಇಎಮ್‌ಎಸ್& ಆಶಾ, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಇವರ ಪತ್ರ ದಿನಾಂಕ:  ೨೧-೦೪-೨೦೨೬ ರಂತೆ ೯ ವಿವಿಧ ಸೇವೆಗಳನ್ನು ಆಶಾ ನಿಧಿ ತಂತ್ರಾAಶದಲ್ಲಿ ನಿಷ್ಕಿçಯೆಗೊಳಿಸಿರುದಾಗಿ ಎಂದು ತಿಳಿಸಿರುತ್ತಾರೆ. ಇದರಿಂದ ಪ್ರತೀಕಾರ್ಯಕರ್ತೆಗೆರೂ.೫೦೦-೧೦೦೦ ವರೆಗೆ ಪ್ರೋತ್ಸಾಹಧನಕಡಿತವಾಗಲಿದೆ.ಈ ಕೆಲಸಗಳನ್ನು ಕಾರ್ಯಕರ್ತೆಯರು ಹಲವಾರು ವರ್ಷಗಳಿಂದ ಮಾಡುತ್ತಿದ್ದು, ಇವು ತಾಯಿ-ಮಗು ಸುರಕ್ಷತೆಗೆ, ಬಡಜನತೆಯಆರೋಗ್ಯಕ್ಕೆಅತ್ಯಂತಅಗತ್ಯಇರುವುವು ಆಗಿವೆ. ಈಗ ಕಾರ್ಯಕರ್ತೆಯರು ಈ ಸೇವೆಗಳನ್ನು ನೀಡದಿದ್ದಲ್ಲಿಜನರಿಗೆ ಹಲವಾರುಸಮಸ್ಯೆಗಳು ಆಗುತ್ತವೆ.
ಕೂಡಲೇ ಸಮಸ್ಯೆಗಳ ಪರಿಹಾರಕ್ಕೆ ದಿನಾಂಕ ನಿಗದಿ ಮಾಡಿ ಸಂಘದ ಮುಖಂಡರೊAದಿಗೆಕೂಡಲೆ ಸಭೆಕರೆದು ಸೂಕ್ತಕ್ರಮಕ್ಕೆ ಮುಂದಾಗಬೇಕೆAದುಈ ಮೂಲಕ ಕರ್ನಾಟಕರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)ದ ವತಿಯಿಂದ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಯಎಲ್ಲಾ ಆಶಾ ಮುಖಂಡರುಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್