LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ನೀಡಿ: ಸಿದ್ರಾಮೇಶ್ವರ


ಕೊಪ್ಪಳ ಜೂನ್ 19: ಜೂನ್ 28 ರಿಂದ ಜುಲೈ 1ರ ವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಡಿ 5 ವರ್ಷದೊಳಗಿನ ಎಲ್ಲ್ಲ ಮಕ್ಕಳಿಗೂ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.
 ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಕುರಿತು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಗುರುವಾರ (ಜೂ. 18ರಂದು) ಹಮ್ಮಿಕೊಂಡಿದ್ದ 2ನೇ ಸುತ್ತಿನ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ನಮ್ಮ ದೇಶದಲ್ಲಿ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಪೋಲಿಯೋ ನಿರ್ಮೂಲನೆ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಮನೆ ಮನೆಗೆ ತೆರಳಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಬೇಕು. ಪಲ್ಸ್ ಪೋಲಿಯೋ ಲಸಿಕೆಯಿಂದ ಯಾವುದೇ ಅರ್ಹ ಮಗು ವಂಚಿತವಾಗಬಾರದು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 28 ರಿಂದ ಜುಲೈ 1 ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಇದಕ್ಕಾಗಿ ವಿವಿಧ ಇಲಾಖೆಗಳ ಸಹಕಾರ ತೆಗೆದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
 ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಪೋಲಿಯೊ ಲಸಿಕೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಿ ತಮಗೆ ವಹಿಸಲಾದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಎನ್.ಜಿ.ಓ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ತೆಗೆದುಕೊಂಡು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು 100ಕ್ಕೆ 100ರಷ್ಟು ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
 ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ಲಿಂಗರಾಜು ಟಿ., ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ರವೀಂದ್ರನಾಥ ಎಂ.ಎಚ್., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳಾದ ಡಾ.ಪ್ರಕಾಶ ಎಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ ಡಾ. ಶಶೀಧರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳಾದ ಡಾ. ಗೋನಾಳ ಕುಮಾರಸ್ವಾಮಿ, ಕೊಪ್ಪಳ ರೋಟರಿ ಕ್ಲಬ್ ಅಧ್ಯಕ್ಷರಾದ ಡಾ. ಕೆ.ಜಿ ಕುಲಕರ್ಣಿ, ಇನ್ನರ್ ವೀಲ್ ಕ್ಲಬ್ ಡಾ. ರಾಧಾ ಕುಲಕರ್ಣಿ ಸೇರಿದಂತೆ ಇತರೆ ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಎನ್.ಜಿ.ಓ.ಗಳ ಪ್ರನಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್