LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ವಾಸವಿ ಶಾಲೆ  ವಿದ್ಯಾರ್ಥಿಗಳ ಸಂಕಲ್ಪ

ಬಳ್ಳಾರಿ, ಜು,10 : ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಧೃಢ ಸಂಕಲ್ಪ  ಮಾಡಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ಜವಬ್ದಾರಿಯಿಂದ ನಿರ್ವಹಿಸಬೇಕು ಎಂದು  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ತರಬೇತುದಾರರಾದ ವೆಂಕಟೇಶ್ ರವರು ತಿಳಿಸಿದ್ದಾರೆ. ಅವರು ಇಂದು ನಗರದ ಶ್ರೀ ವಾಸವಿ  ವಿದ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಜನ ಜಾಗೃತಿ ವೇದಿಕೆ ಹಾಗೂ ಶಾಲೆಯ ಸಹಯೋಗದಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು  ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ವ್ಯಕ್ತಿತ್ವವನ್ನು ಬೆಳಸಿಕೊಳ್ಳಬೇಕು ಎಂದು ಮುಖ್ಯ ಅತಿಥಿಗಳಾಗಿ ಕರೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ವೀರೇಶ್.ಯು ರವರು ಮಾತನಾಡಿ,”ಶಾಲೆಯ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ,ನೈತಿಕ ಮೌಲ್ಯಗಳು ಹಾಗೂ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವ ಪವಿತ್ರ ತಾಣವಾಗಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಗುರಿಯನ್ನು ಹೊಂದಿ, ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನ ಶೈಲಿಯನ್ನು ಆಳವಡಿಸಿಕೊಳ್ಳಬೇಕು. ಪೋಷಕರು,ಶಿಕ್ಷಕರು ಮತ್ತು ಸಮಾಜದ ಸಹಕಾರದಿಂದ ಮಾತ್ರ ಡ್ರಗ್ಸ್ ಮುಕ್ತ ಸಮಾಜವನ್ನು ನಿರ್ಮಿಸಲು ಸಾಧ್ಯ.ಇಂದಿನ ಜಾಗೃತಿ ಕಾರ್ಯಕ್ರಮದ ಸಂದೇಶವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಕುಟುಂಬ ಹಾಗೂ ಸಮಾಜಕ್ಕೂ ತಲುಪಿಸಬೇಕು ಎಂದು ಕರೆ ನೀಡಿದರು.
ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ವಿಟ್ಟ ಕೃಷ್ಣಕುಮಾರ್, ಕಾರ್ಯದರ್ಶಿಗಳಾದ ಪಿ.ಎನ್.ಸುರೇಶ್,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕರಾದ ಶ್ರೀಮತಿ ರತ್ನ,ಸೇವಾ ಪ್ರತಿನಿಧಿಗಳಾದ ಗೌಸಿಯಾ ಬೇಗಂ, ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಶ್ರೀಮತಿ ರೂಪ, ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯಾದ ಕು.ಹರಣಿ ಪ್ರಾರ್ಥನಾ ಗೀತೆಯನ್ನು ಸಲ್ಲಿಸಿದರು. ಶಿಕ್ಷಕಿಯಾದ ಬಸವರಾಜೇಶ್ವರಿ ಜೆ.ಎಸ್. ಕಾರ್ಯಕ್ರಮವನ್ನು ನಿರ್ವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, ಆರೋಗ್ಯಕರ , ಶಿಸ್ತಿನ ಹಾಗೂ ಜವಾಬ್ದಾರಿಯುತ ಜೀವನ ನಡೆಸುವ ಸಂದೇಶವನ್ನು ಯಶಸ್ವಿಯಾಗಿ ಸಾರಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್