LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನೌಕರರಿಗೆ ರಕ್ಷಣೆ ನೀಡಿ ವೀರಶೈವ ಲಿಂಗಾಯತ ನೌಕರರ ಸಂಘ






ಬಳ್ಳಾರಿ, ಏ.06.: ಪಾಲಿಕೆಯ ಕಿರಿಯ ಅಭಿಯಂತರ ಜಿ.ಎಂ. ವೀರೇಶ್ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕವು  ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ನಿನ್ನೆ ದಿನ  ಪಾಲಿಕೆ ಸದಸ್ಯ ವಿ. ಕುಬೇರ ಎಂಬುವವರು. ವಿನಾಕಾರಣ ವೀರೇಶ್ ಅವರ ಮೇಲೆ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ. ಒಬ್ಬ ಸರ್ಕಾರಿ ನೌಕರನ ಮೇಲೆ ಸಾರ್ವಜನಿಕವಾಗಿ ನಡೆದ ಈ ದೌರ್ಜನ್ಯವು ನೌಕರರ ವಲಯದಲ್ಲಿ ಅಭದ್ರತೆಯ ಭಾವನೆಯನ್ನು ಮೂಡಿಸಿದೆ.

ಸರ್ಕಾರಿ ನೌಕರರ ರಕ್ಷಣೆ:

ಕರ್ತವ್ಯನಿರತ ಅಥವಾ ಸಾರ್ವಜನಿಕ ಸೇವೆಯಲ್ಲಿರುವ ನೌಕರರ ಮೇಲೆ ಕೈ ಮಾಡುವುದು ಕಾನೂನುಬಾಹಿರವಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಆರೋಪಿಗಳ ವಿರುದ್ಧ ಕ್ರಮ:

ಜನಪ್ರತಿನಿಧಿಯಾಗಿ ಸಮಾಜಕ್ಕೆ ಮಾದರಿಯಾಗಬೇಕಾದ ಪಾಲಿಕೆ ಸದಸ್ಯರು, ಕಾನೂನನ್ನು ಕೈಗೆತ್ತಿಕೊಂಡು ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ಅವರ ಸ್ಥಾನಕ್ಕೆ ತಕ್ಕುದಲ್ಲದ ನಡವಳಿಕೆಯಾಗಿದೆ. ಹಲ್ಲೆ ನಡೆಸಿದ ವಿ. ಕುಬೇರ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

ಕರ್ತವ್ಯಕ್ಕೆ ಅಡ್ಡಿ:

ಸರ್ಕಾರಿ ನೌಕರನ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ದೈಹಿಕವಾಗಿ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕಠಿಣ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಬೇಕು.

ನೌಕರರ ಹಿತರಕ್ಷಣೆ ಮತ್ತು ನ್ಯಾಯದ ಪರವಾಗಿ ತಾವು ತಕ್ಷಣವೇ ಸ್ಪಂದಿಸಿ, ನೊಂದ ನೌಕರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಿದೆ.

ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಂ.ಭದ್ರಯ್ಯ, ರಾಜಶೇಖರಗೌಡ, ಶಶಿಧರ,  ಕೋಳೂರು ವೆಂಕಟೇಶಗೌಡ, ಅಕ್ಕಿ ದರ್ಮೇಂದ್ರ, ಪಲ್ಲೇದ   ಜಗದೀಶ್ ಅನ್ನದಾನಯ್ಯಸ್ವಾಮಿ ಮೊದಲಾದವರಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್