LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ನಿಧನ

ಬೆಂಗಳೂರು,ಏ.03: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಎರಡು ವರ್ಷದಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ ಜಯಾ, ಪುತ್ರ ಅಭಿಜಿತ್‌ ಇದ್ದಾರೆ. ಬೆಂಗಳೂರಿನ ಬನ್ನೇರಘಟ್ಟ ರಸ್ತೆಯಲ್ಲಿರುವ ಸೌತ್‌ ಸಿಟಿ ಅಪಾರ್ಟ್‌ ಮೆಂಟ್‌ ಗೆ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೂಲತಃ ಶಿರಸಿ ತಾಲ್ಲೂಕಿನವರಾದ ಎಂ.ಕೆ.ಭಾಸ್ಕರರಾವ್‌ ಅವರು ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ. ಅಲ್ಲಿಯೇ ಶಿಕ್ಷಣ ಮುಗಿಸಿ ನಂತರ ಪತ್ರಿಕೋದ್ಯಮ ಸೇರಿದವರು. ಪ್ರಜಾವಾಣಿ ಪತ್ರಿಕೆಯಲ್ಲಿಯೇ ಮೂರು ದಶಕಕ್ಕೂ ಅಧಿಕ ಕಾಲ ಕೆಲಸ ಮಾಡಿದ್ದರು.

ಸಮಾಜಮುಖಿ ಪತ್ರಕರ್ತರಾಗಿದ್ದ ಭಾಸ್ಕರರಾವ್‌ ತಮ್ಮ ಹರಿತ ಬರವಣಿಗೆ ಮಾತ್ರವಲ್ಲದೇ ಮಾತಿನಿಂದಲೂ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆ ಹಲವಾರು ಚಾನೆಲ್‌ಗಳಲ್ಲಿ ವಿಶ್ಲೇಷಣೆ ಮಾಡುತಿದ್ದರು. ಪ್ರಚಲಿತ ವಿದ್ಯಾಮಾನಗಳ ಕುರಿತು ನಿಖರವಾಗಿ ಮಾತನಾಡುವ ಜ್ಞಾನ ಅವರಲ್ಲಿತ್ತು. ಹಿರಿಯ ಪತ್ರಕರ್ತರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್