LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಹೊಸ ಸಿನಿಮಾ ರಣಬಾಲಿ

      ಟಾಲಿವುಡ್ ಸ್ಟಾರ್ ಕಪಲ್ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮತ್ತೊಮ್ಮೆ‌ ಒಂದಾಗಿದ್ದಾರೆ. ಗೀತಾ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ಬಳಿಕ ಈ ಜೋಡಿ‌ಯ ಹೊಸ ಸಿನಿಮಾ ಘೋಷಣೆಯಾಗಿದೆ. ಗಣರಾಜ್ಯೋತ್ಸವದ ಅಂಗವಾಗಿ ಟೈಟಲ್ ಗ್ಲಿಂಪ್ಸ್ ಜೊತೆಗೆ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಾಗಿದೆ.

ರಣಬಾಲಿಯಾಗಿ ವಿಜಯ್ ದೇವರಕೊಂಡ ಅಬ್ಬರಿಸಿದ್ದಾರೆ. ವಿಜಯ್ 14ನೇ ಸಿನಿಮಾಗೆ ರಣಬಾಲಿ ಎಂಬ ಶೀರ್ಷಿಕೆ ಇಡಲಾಗಿದೆ. ‌19ನೇ ಶತಮಾನದಲ್ಲಿ ಬ್ರಿಟಿಷರು ಉಂಟುಮಾಡಿದ ನೋವುಗಳ ಮೇಲೆ ಬೆಳಕು ಚೆಲ್ಲುವುದಲ್ಲದೇ, ಭಾರತದ ಬೃಹತ್ ಆರ್ಥಿಕ ಶೋಷಣೆಯ ಬಗ್ಗೆಯೂ ರಣಬಾಲಿ ಸಿನಿಮಾದಲ್ಲಿ ಕಟ್ಟಿಕೊಡಲಾಗುತ್ತಿದೆ.

ಸೂಪರ್ ಹಿಟ್ ಟಾಕ್ಸಿ ವಾಲಾ ಸಿನಿಮಾ ಬಳಿಕ ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ರಾಹುಲ್ ಸಂಕೃತ್ಯಾನ್ ರಣಬಾಲಿಗಾಗಿ ಕೈ ಜೋಡಿಸಿದ್ದಾರೆ. ಜಯಮ್ಮ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ, ದಿ ಮಮ್ಮಿ ಖ್ಯಾತಿಯ ಅರ್ನಾಲ್ಡ್ ಮೋಸ್ಲೂ, ಸರ್ ಥಿಯೋಡರ್ ಹೆಕ್ಟರ್ ತಾರಾ ಬಳಗದಲ್ಲಿದ್ದಾರೆ.

ಡಿಯರ್ ಕಾಮ್ರೇಡ್ ಮತ್ತು ಖುಷಿ ಸಿನಿಮಾ ಬಳಿಕ ಮೈತ್ರಿ ಮೂವೀ ಮೇಕರ್ಸ್ ವಿಜಯ್ ದೇವರಕೊಂಡ 'ರಣಬಾಲಿಗೆ' ಹಣ ಹಾಕುತ್ತಿದೆ. ಈ ಚಿತ್ರವನ್ನು ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್ ನಿರ್ಮಿಸಿದ್ದು, ಟಿ-ಸೀರೀಸ್ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದೆ. ಇದೇ ವರ್ಷ ಸೆಪ್ಟೆಂಬರ್ 11ರಂದು 'ರಣಬಾಲಿ' ಸಿನಿಮಾ ಬಿಡುಗಡೆಯಾಗಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್