LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ - ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು


ಮುದ್ದೇಬಿಹಾಳ: ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಜಲ ಜೀವನ ಮಿಷನ್ (ಜೆಜಿಎಂ) ಯೋಜನೆಯಡಿ ಅನುಷ್ಠಾನಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಮಂಗಳವಾರ ಬೆಂಗಳೂರಿನ ರಾಜ್ಯ ಗುಣಮಟ್ಟದ ಮೇಲ್ವಿಚಾರಣಾ ಅಧಿಕಾರಿ (SQM) ಮೋಹನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

​ಗ್ರಾಮದ ಪ್ರತಿ ಮನೆ ಮನೆಗೆ ತೆರಳಿ ನಳದ ಸಂಪರ್ಕಗಳನ್ನು ವೀಕ್ಷಿಸಿದ ಅಧಿಕಾರಿಗಳು, ಮನೆಯ ಯಜಮಾನಿಯರನ್ನು ಮಾತನಾಡಿಸಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿದೆಯೇ ಎಂದು ವಿಚಾರಿಸಿದರು. ಈ ವೇಳೆ ಉತ್ತರಿಸಿದ. ಕೆಲವು ನಳಗಳಿಗೆ ನೀರು ಬರುತ್ತದೆ,

ಕೆಲವು ನಳಗಳಲ್ಲಿ ನೀರು ಸರಿಯಾಗಿ ಬರುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.


​ನೀರಿನ ಮೂಲದ ಕೊರತೆ: ಪರಿಶೀಲನೆ ವೇಳೆ ಗ್ರಾಮಸ್ಥರು ಅಧಿಕಾರಿಗಳ ಮುಂದೆ ತಮ್ಮ ಅಳಲು ತೋಡಿಕೊಂಡು, "ಗ್ರಾಮದಲ್ಲಿ ಕೇವಲ ಒಂದೇ ಒಂದು ಕೊಳವೆ ಬಾವಿ ಇದೆ. ಸರಿಯಾದ ನೀರಿನ ಮೂಲ (ಸೋರ್ಸ್) ಇಲ್ಲದ ಕಾರಣ ನಳಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಅಡಿ ನೀರು ಬಂದರೆ ಮಾತ್ರ ನಮಗೆ ಸೌಲಭ್ಯ ಸಿಗುತ್ತದೆ, ಇಲ್ಲದಿದ್ದರೆ ಕುಡಿಯುವ ನೀರಿಗೆ ಪರದಾಡುವಂತಾಗಿದೆ," ಎಂದು ವಿವರಿಸಿದರು.

​ಸರಿಯಾಗಿ ಬಾರದ ನೀರು: ಗ್ರಾಮದ ಕೆಲವು ವಾರ್ಡ್‌ಗಳಲ್ಲಿ  ಜೆಜಿಎಂ ನಳದಲ್ಲಿ ನೀರು ಪೂರೈಕೆಯಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದರು. ಕಾಮಗಾರಿಯ ಗುಣಮಟ್ಟ ಮತ್ತು ನೀರಿನ ಹಂಚಿಕೆಯಲ್ಲಿನ ಲೋಪಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.

​ವರದಿ ಸಲ್ಲಿಕೆ:

ಎಲ್ಲಾ ದೂರುಗಳನ್ನು ಆಲಿಸಿದ ಅಧಿಕಾರಿ ಮೋಹನ್ ಅವರು, ಗ್ರಾಮದ ಕಾಮಗಾರಿಗಳ ಕುರಿತು ಸಮಗ್ರವಾಗಿ ಪರಿಶೀಲಿಸಿದ್ದು, ಈ ಬಗ್ಗೆ ಶೀಘ್ರವೇ ವರದಿಯನ್ನು ಸಿದ್ಧಪಡಿಸಿ  ಸರಕಾರಕ್ಕೆ

ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಂಜಿನಿಯರ್ ಎ ಎಲ್ ರಾಠೋಡ, ಅಡವಿ ಸೋಮನಾಳ ಗ್ರಾಪಂ ಕಾರ್ಯದರ್ಶಿ ಬಸನಗೌಡ ಬಿರಾದಾರ, ಗ್ರಾಮಸ್ಥರಾದ ಅಂಬ್ರಯ್ಯ  ಮಠ, ಬಸವರಾಜ ಕುಂಬಾರ,ಬಸಪ್ಪ ಬಿರಾದಾರ,ವಿರೇಶ ಚಲವಾದಿ,ಬೀರಪ್ಪ ಸೋಮುನಾಳ,ಮೌನೇಶ ಬಿರಾದಾರ,ಜೆಜಿಎಂ ಯೋಜನೆಯ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಹಾಜರಿದ್ದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್